ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ

0
145

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆಂಗಳೂರಿನ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಶ್ರೀ (81) ತಡರಾತ್ರಿ 12.01ರ ಸುಮಾರಿಗೆ ವಿಧಿವಶರಾಗಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಿಶ್ಚಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ವಿಧಿವಿಧಾನ ನಡೆಯಲಿದ್ದು, ಕೆಂಗೇರಿಯಲ್ಲಿನ ಮಠದ ಆವರಣದಲ್ಲೇ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಚಂದ್ರಶೇಖರನಾಥ ಸ್ವಾಮೀಜಿ ಶ್ರೀ ಮಠದ ಸ್ಥಾಪನೆ ಮಾಡಿದರು. ಶಿಕ್ಷಣ ಮತ್ತು ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಸದ್ಯ ಸ್ವಾಮೀಜಿಗಳ ನಿಧನಕ್ಕೆ ರಾಜಕೀಯ ನಾಯಕರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here