ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿಯೊಂದಿಗೆ ಸಾಹಿತ್ಯ ಹಾಗೂ ಸಂಸ್ಕೃತಿ ಕ್ಷೇತ್ರದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಚಂದ್ರಶೇಖರ ಪೇರಾಲು ಅವರನ್ನು ಗಡಿನಾಡು ಕಾಸರಗೋಡಿನ ಖ್ಯಾತ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ನೀಡುವ ಪ್ರತಿಷ್ಠಿತ **”ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026″**ಗೆ ಆಯ್ಕೆ ಮಾಡಲಾಗಿದೆ.
ಸಾಹಿತ್ಯ, ಕನ್ನಡ ಭಾಷೆಯ ಬೆಳವಣಿಗೆ, ಅರೆಭಾಷೆಯ ಸಂರಕ್ಷಣೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ನೀಡಿದ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.
ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಸಂದರ್ಭದಲ್ಲಿ ಚಂದ್ರಶೇಖರ ಪೇರಾಲು ಅವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026” ಪ್ರದಾನ ಮಾಡಲಾಗುವುದು.
ಈ ವಿಷಯವನ್ನು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಂದ್ರಶೇಖರ ಪೇರಾಲು ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕನ್ನಡಾಭಿಮಾನಿ ವಲಯದಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.

