ಬ್ರಹ್ಮಾವರ: ಸ್ವ- ಉದ್ಯೋಗದ ಮೂಲಕ ಸ್ವಾವಲಂಬಿ ಬದುಕನ್ನು ರೂಪಿಸಲು ರುಡ್‌ಸೆಟ್ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ. ಹಾಗಾಗಿ ಮುಂದಿನ ಬದುಕಿನಲ್ಲಿ ಕೌಶಲ್ಯದ ಅವಕಾಶಗಳನ್ನು ಜೀವನದಲ್ಲಿ ಬಳಸಿ ಕೊಂಡು ಹೊಸ ಬದುಕನ್ನು ಕಟ್ಟಿಕೊಳ್ಳಿ ಎಂದು ಕಿರಣ್ ಗಂಗಣ್ಣವರ್, ಗೌರವಾನ್ವಿತ ನ್ಯಾಯಾದೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉಡುಪಿ ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಉಡುಪಿ, ಜಿಲ್ಲಾ ಕಾರಾಗೃಹ, ಹಿರಿಯಡ್ಕ ಮತ್ತು ರುಡ್‌ಸೆಟ್ ಸಂಸ್ಥೆ, ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ 06 ದಿನಗಳ ಕಾಲ ನಡೆಯುವ ಉಡುಪಿ ಜಿಲ್ಲೆಯ ಕಾರಾಗೃಹ ಜೈಲುವಾಸಿಗಳಿಗೆ “ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸಸಿಗೆ ನೀರು ಹಾಕುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ, ಜೈಲುವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಇಂದು ಉದ್ದಿಮೆಯನ್ನು ಮಾಡಲು ಕೌಶಲ್ಯಗಳ ಕೊರತೆ ತುಂಬಾ ಇದೆ.
ಆ ನಿಟ್ಟಿನಲ್ಲಿ ಸಿಸಿ ಟಿವಿ ರಿಪೇರಿ ಮತ್ತು ಸರ್ವೀಸ್ ಸಂಬAಧಿಸಿದ ಕೌಶಲ್ಯಗಳ ತರಬೇತಿಗಳನ್ನು ನಿಮ್ಮ ಬಳಿಯೇ ಬಂದು ರುಡ್‌ಸೆಟ್ ಸಂಸ್ಥೆ ಕೊಡುತ್ತಿದೆ. ಹಾಗಾಗಿ ನಿಮ್ಮ ಬದುಕನ್ನು ಪರಿವರ್ತನೆ ಮಾಡಿಕೊಳ್ಳುವುದರ ಮೂಲಕ ತಾವುಗಳು ಇಲ್ಲಿಂದ ಬಿಡುಗಡೆಯಾಗಿ ಹೋದ ಮೇಲೆ ಸ್ವಾವಲಂಬಿ ಬದುಕನ್ನು ರೂಪಿಸಿಕೊಂಡರೆ ನೀವು ಯಶಸ್ವಿಯಾದಂತೆ ಎಂದು ಹೇಳಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉಡುಪಿ ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ವಿಜಯಕುಮಾರ ಡಿ. ಚವ್ಹಾಣ್ ಮಾತನಾಡಿ ಈ ಒಂದು ತರಬೇತಿಯಲ್ಲಿ ಸಿಗುವಂತಹ ಕೌಶಲ್ಯಗಳನ್ನು ಉಪಯೋಗಿಸಿಕೊಂಡು ಯಶಸ್ವಿ ಉದ್ಯಮಿಯಾಗಿ, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಉಡುಪಿ ಜಿಲ್ಲೆಯ ಲೀಡ್ ಡಿಸ್ಟಿಕ್ಟ್ ಮ್ಯಾನೇಜರ್ ಆದ ಹರೀಶ ಜಿ. ಮಾತನಾಡಿ ಬ್ಯಾಂಕಿನಿAದ ಸೀಗುವ ಸಾಲ- ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಗಳಾದ ಉಡುಪಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಅರುಣ್ ಬಿ, ಬದುಕಿನಲ್ಲಿ ಕೌಶಲ್ಯಗಳಿದ್ದರೆ ನಾವು ಎಲ್ಲಿ ಬೇಕಾದರೂ ಜೀವನ ಕಟ್ಟಿಕೊಳ್ಳಬಹುದು. ಹಾಗಾಗಿ ಈ ತರಬೇತಿಯನ್ನು ತಾವೇಲ್ಲರೂ ಸದುಪಯೋಗಪಡಿಸಿಕೊಂಡು ಯಶಸ್ವಿಯಾಗಿ ಎಂದು ಶುಭ ಹಾರೈಸಿದರು.
ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಮ್ ತಪ್ಪು ಮಾಡುದು ಸಹಜ ಆದರೆ ತಪ್ಪನ್ನು ಅರಿತು ತಿದ್ದಿ ನಡೆಯುದು ಮನುಜ ಗುಣ ಎಂದು ಹೇಳಿ, ಮುಂದಿನ ನಿಮ್ಮ ಜೀವನದಲ್ಲಿ ಸ್ವ ಉದ್ಯೋಗ ಕೈಗೊಂಡು ಗೌರವ ಮತ್ತು ಘನತೆಯನ್ನು ಸಂಪಾದಿಸಿಕೊಳ್ಳಿ ಎಂದು ಶುಭ ಹಾರೈಸಿದರು. ಹಿರಿಯ ಉಪನ್ಯಾಸಕರಾದ ಸಂತೋಷ್ ಶೆಟ್ಟಿ ನಿರೂಪಿಸಿ, ಜಿಲ್ಲಾ ಕಾರಾಗೃಹದ ಸಿಬ್ಬಂದಿ ಆದ ರೇಷ್ಮಾ ನಾಯಕ್ ಸ್ವಾಗತಿಸಿ, ಹಿರಿಯ ಕಛೇರಿ ಸಹಾಯಕರಾದ ರವಿ ವಂದಿಸಿದರು.

