Tuesday, March 18, 2025
Homeಧಾರ್ಮಿಕವಡಭಾಂಡ ಬಲರಾಮ ದೇವಸ್ಥಾನ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

ವಡಭಾಂಡ ಬಲರಾಮ ದೇವಸ್ಥಾನ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

ಮಲ್ಪೆ: ಇಲ್ಲಿನ ಜೀರ್ಣೋದ್ದಾರಗೊಂಡ ವಡಭಾಂಡೇಶ್ವರ ಶ್ರೀ ಬಲರಾಮ ದೇವಸ್ಥಾನದ ಪುನಃಪ್ರತಿಷ್ಠೆ ಬಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವು ದೇಗುಲದ ಪ್ರಧಾನ ತಂತ್ರಿ ಸುಬ್ರಹ್ಮಣ್ಯ ತಂತ್ರಿಗಳ ಪೌರೋಹಿತ್ಯದಲ್ಲಿ ಬುಧವಾರ ಬೆಳಗ್ಗೆ ಜರಗಿತು. ಶಾಸಕ ಯಶ್‌ಪಾಲ್ ಸುವರ್ಣ ಅವರು ಚಪ್ಪರ ಮುಹೂರ್ತವನ್ನು ನೆರವೇರಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಕಾರ್ಯಾಧ್ಯಕ್ಷ ನಾಗರಾಜ್ ಮೂಲಿಗಾರ್, ಗೌರವಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಉಪಾಧ್ಯಕ್ಷ ಆನಂದ ಪಿ. ಸುವರ್ಣ, ರಮೇಶ್ ಕೋಟ್ಯಾನ್, ಶರತ್ ಕುಮಾರ್ ಬೈಲಕರೆ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಜಿ. ಕೊಡವೂರು, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಶಿಧರ ಎಂ. ಅಮೀನ್, ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರು, ಆನುವಂಶಿಕ ಆಡಳಿತ ಮೊಕ್ತೇಸರ ಶ್ರೀನಿವಾಸ ಭಟ್, ಡಾ। ವಿಜಯೇಂದ್ರ ರಾವ್, ಸದಾನಂದ ಸಾಲ್ಯಾನ್, ದೇಗುಲದ ಅಭಿವೃದ್ಧಿ ಸಮಿತಿ, ಬ್ರಹ್ಮ ಕಲಶೋತ್ಸವ ಸಮಿತಿಯ, ಮಹಿಳಾ ಸಮಿತಿಯ ಪದಾಧಿಕಾರಿಗಳು ಸದಸ್ಯರು ಹಾಗೂ ಭಕ್ತರು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular