Monday, July 15, 2024
Homeಅಪರಾಧಶಾಸಕ ಹರೀಶ್ ಪೂಂಜಾ ವಿರುದ್ಧದ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಶಾಸಕ ಹರೀಶ್ ಪೂಂಜಾ ವಿರುದ್ಧದ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಬೆಳ್ತಂಗಡಿ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ಪ್ರಶ್ನಿಸಿ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದ ಶಾಸಕ ಪೂಂಜ ವಿರುದ್ಧ ಈಗ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಎಸ್ಪಿಯವರಿಂದ ನಿಯೋಜಿಸಲ್ಪಟ್ಟ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಪುತ್ತೂರು ಪೊಲೀಸ್ ಇನ್ಸ್ ಪೆಕ್ಟರ್ ಸತೀಶ್ ಜಿ.ಜೆ. ಈ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ಕಾಯ್ದೆಯಡಿ ಬಿಜೆಪಿ ಯುವ ಮೋರ್ಚಾದ ನಾಯಕರುಗಳಾದ ಶಶಿರಾಜ್ ಶೆಟ್ಟಿಯವರನ್ನು ಬಂಧಿಸಲಾಗಿತ್ತು. ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಶಾಸಕ ಹರೀಶ್ ಪೂಂಜ ಪೊಲೀಸರನ್ನು ನಿಂದಿಸಿದ್ದಲ್ಲದೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಆರೋಪಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು.

RELATED ARTICLES
- Advertisment -
Google search engine

Most Popular