ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನ ಪ್ರತ್ಯಕ್ಷಗೊಂಡು ವಾಹನ ಸವಾರರಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ. ರಾತ್ರಿ ಸುಮಾರು 9.45ರ ವೇಳೆಗೆ ಮರವನ್ನು ಮುರಿದು ರಸ್ತೆ ಮಧ್ಯೆ ನಿಂತ ಕಾಡಾನೆ, ಒಂದು ತಾಸಿಗೂ ಅಧಿಕ ಕಾಲ ಅಲ್ಲೇ ಅಲೆಯುತ್ತಿತ್ತು. ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತು, ವಾಹನ ಸವಾರರು ಭಯಭೀತರಾಗಿದ್ದರು.


