ಚಾರ್ಟರ್ಡ್ ಸಹಕಾರಿ ಬ್ಯಾಂಕ್ ದೇಶದಲ್ಲೇ ಮಾದರಿ: ಮಾಧವ ರೆಡ್ಡಿ

0
82

ಬೆಂಗಳೂರು: ಸಹಕಾರಿ ಬ್ಯಾಂಕುಗಳು ಮುಚ್ಚುತ್ತಿರುವ ಸಂದರ್ಭದಲ್ಲಿ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ಗ್ರಾಹಕರ ವಿಶ್ವಾಸ ಗಳಿಸುತ್ತಾ ಲಾಭದಾಯಕವಾಗಿ ಮುನ್ನಡೆಯುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ ಎಂದು ಸಹಕಾರ ಅಭಿವೃದ್ಧಿ ಅಧಿಕಾರಿ ಮಾಧವ ರೆಡ್ಡಿ ಪ್ರಶಂಸೆ ವ್ಯಕ್ತಪಡಿಸಿದರು.
ಕೋರಮಂಗಲದಲ್ಲಿ ನಡೆದ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನ ರಜತ ಮಹೋತ್ಸವವನ್ನು ಉದ್ಘಾಟಿಸಿ, ಸ್ಮರಣಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಾತನಾಡಿದ ಅವರು, ಚಾರ್ಟರ್ಡ್ ಬ್ಯಾಂಕ್ 2022ನೇ ಸಾಲಿನ ದೇಶದ ಅತ್ಯುತ್ತಮ ಬ್ಯಾಂಕ್ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ಜತೆಗೆ ಶೂನ್ಯ ಎನ್ .ಪಿಎ ಹೊಂದಿದ ಸಾಧನೆ ಮಾಡುವುದು ಸುಲಭದ ಮಾತಲ್ಲ. ಇಂಥದ್ದೊಂದು ಸಾಧನೆಗೈದ ಸಹಕಾರಿ ಬ್ಯಾಂಕ್ ದೇಶಕ್ಕೆ ಮಾದರಿಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕ್ ನ ಅಧ್ಯಕ್ಷ ಎಂ. ಮುನಿರೆಡ್ಡಿ ಕೇವಲ 1.29 ಕೋಟಿ ರೂಪಾಯಿ ಬಂಡವಾಳದೊಂದಿಗೆ ಆರಂಭವಾದ ಬ್ಯಾಂಕ್ 445 ಕೋಟಿ ರೂಪಾಯಿ ವಹಿವಾಟು ನಡೆಸುವ ಹಂತಕ್ಕೆ ಬೆಳೆದಿದೆ. ಆರು ಸಾವಿರಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿದೆ. ಬ್ಯಾಂಕಿನ ಗ್ರಾಹಕರೇ ಈ ಸಾಧನೆಯ ಹಿಂದಿನ ಕಾರಣಕರ್ತರು ಎಂದರು.
ಉಪಾಧ್ಯಕ್ಷ ನಾರಾಯಣ ಎಸ್ ಭಟ್, ಸಂಸ್ಥಾಪಕ ಅಧ್ಯಕ್ಷ ಎಂ. ನಾಗರಾಜ್, ವಿಜಯರಾಘವ ರೆಡ್ಡಿ, ಬ್ಯಾಂಕಿನ ಸಿಇಓ ಕೆ.ಬಿ.ಶಿವಣ್ಣ, ಆಡಳಿತ ಮಂಡಳಿ ಸದಸ್ಯರಾದ, ಮುನಿವೆಂಕಟಪ್ಪ, ವೆಂಕಟೇಶ್ ಅಯ್ಯರ್ ಇದ್ದರು. ರಜತ ಮಹೋತ್ಸವದ ನೆನಪಿಗಾಗಿ ಸ್ಮರಣೆ ಸಂಚಿಕೆ ಬಿಡುಗಡೆ ಮಾಡಲಾಯಿತು.

LEAVE A REPLY

Please enter your comment!
Please enter your name here