Sunday, January 19, 2025
Homeಕಾರವಾರಕಾರವಾರದಲ್ಲಿ ರಾಸಾಯನಿಕ ಸೋರಿಕೆ: 12ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ

ಕಾರವಾರದಲ್ಲಿ ರಾಸಾಯನಿಕ ಸೋರಿಕೆ: 12ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ

ಕಾರವಾರ: ರಾಸಾಯನಿಕ ಸೋರಿಕೆಯಾಗಿ 12 ಕಾರ್ಮಿಕರು ಅಸ್ವಸ್ಥಗೊಂಡಿರುವ ಘಟನೆ ಕಾರವಾರದ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಕಂಪನಿಯಲ್ಲಿ ಶನಿವಾರ ನಡೆದಿದೆ.

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪತ್ರದೇಶ ಹಾಗೂ ಬಿಹಾರ ಮೂಲದವರಾದ ನೀಲಕಂಠ (22), ಜಹಾನೂರ (20), ಕಮಲೇಶ ವರ್ಮಾ (22), ನಂದಕಿಶೋರ (21), ದೀಪು (28), ಅಜೀಜ್ (23), ಕಲ್ಲು (37), ಸುಜನ್ (26), ನಜೀದುಲ್ಲಾ (24), ಬೇಜನಕುಮಾರ್ (27), ಕಿಶನ್ ಕುಮಾರ್ (28) ಮತ್ತು ಮೋಹಿತ ವರ್ಮಾ(21) ಅಸ್ವಸ್ಥಗೊಂಡವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ರಾಸಾಯನಿಕ ಸೋರಿಕೆಯಾಗಿ ಈ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅಸ್ವಸ್ಥಗೊಂಡ ಕಾರ್ಮಿಕರನ್ನು ಕಾರವಾರದ ಜಿಲ್ಲಾ‌ ಆಸ್ಪತ್ರೆಗೆ ರವಾನೆ ಮಾಡಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಕಂಪನಿ ಅಧಿಕಾರಿಗಳು ದೌಡಾಯಿಸಿದ್ದಾರೆ. ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular