ಚೆನ್ನಪ್ಪ ತಬ್ಬಣ್ಣ ಗೊಂದಿ ಇವರು ಕರ್ನಾಟಕ ಸಬ್ ಜೂನಿಯರ್ ಕಬಡ್ಡಿ ತಂಡಕ್ಕೆ ಆಯ್ಕೆ

0
11

ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ ಕಣಂದಲೆ ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿಯಾದ ಚೆನ್ನಪ್ಪ ತಬ್ಬಣ್ಣ ಗೊಂದಿ ಇವರು ಬೆಂಗಳೂರಿನಲ್ಲಿ ನಡೆದ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ಇವರು ನಡೆಸಿದ ಕರ್ನಾಟಕ ಸಬ್ ಜೂನೀಯರ್ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ , ಕರ್ನಾಟಕ ಸಬ್ ಜೂನಿಯರ್ ಕಬಡ್ಡಿ ತಂಡಕ್ಕೆ ಆಯ್ಕೆ ಆಗಿರುತ್ತಾರೆ.

ಇವರು ಮುಂದಿನ ತಿಂಗಳು ಮಹಾರಾಷ್ಟ್ರದ ಪುಣೆಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸಬ್ ಜೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ , ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈತನಿಗೆ ಶಾಲಾ ಸಂಚಾಲಕರು ಮತ್ತು ಆಡಳಿತ ಮಂಡಳಿ, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ಶಿಕ್ಷಕೇತರ ವೃಂದ ಮತ್ತು ಹಳೆ ವಿದ್ಯಾರ್ಥಿ ಸಂಘ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here