Friday, January 17, 2025
Homeರಾಷ್ಟ್ರೀಯಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ 7 ನಕ್ಸಲರು ಬಲಿ

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ 7 ನಕ್ಸಲರು ಬಲಿ

ರಾಯ್ಪುರ್: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಏಳು ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.‌

ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಜಂಟಿ ತಂಡವು ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಕ್ಷಿಣ ಅಬುಜ್‌ಮದ್‌ನ ಕಾಡಿನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ 7 ಮಂದಿ ನಕ್ಸಲರು ಹತರಾಗಿದ್ದಾರೆ.

ಸಿಆರ್‌ಪಿಎಫ್ ತಂಡಗಳಲ್ಲದೆ ನಾರಾಯಣಪುರ, ದಾಂತೇವಾಡ, ಬಸ್ತಾರ್ ಮತ್ತು ಕೊಂಡಗಾಂವ್ ಜಿಲ್ಲೆಗಳ ಪೊಲೀಸ್‌ನ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular