ಚಿಕ್ಕಮಗಳೂರು: ಪ್ರತಿಭಟಿಸಿದ 29ಕ್ಕೂ ಹೆಚ್ಚು ಜನರ ಮೇಲೆ ಎಫ್​ಐಆರ್, ಲಾಠಿಚಾರ್ಜ್ ಖಂಡಿಸಿ 3 ತಾಲೂಕು ಬಂದ್​ಗೆ ಕರೆ

0
10

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬೋರಮ್ಮ ಮೃತಪಟ್ಟ ನಂತರದ ಬೆಳವಣಿಗೆಗಳು ಪರಿಸ್ಥಿತಿಯನ್ನು ಉದ್ವಿಗ್ನಗೊಳಿಸಿವೆ. ಸಾರ್ವಜನಿಕರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಲಾಠಿಚಾರ್ಜ್ ಘಟನೆ ನಡೆದಿದೆ. ಬಾಳೆಹೊನ್ನೂರು ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಪ್ರತಿಭಟನೆ ನಡೆಸಿದ 29ಕ್ಕೂ ಹೆಚ್ಚು ಜನರ ವಿರುದ್ಧ ಎಫ್​ಐಆರ್ ದಾಖಲಾಗಿವೆ. ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ, ಪೊಲೀಸ್ ವಾಹನಗಳನ್ನು ಪಲ್ಟಿ ಮಾಡುವ ಯತ್ನ, ಮತ್ತು ರಸ್ತೆ ತಡೆ ನಡೆಸಿದ ಆರೋಪದ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಈ ಘಟನೆಗಳಲ್ಲಿ ಹತ್ತಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ.

ಕಾಡಾನೆ ದಾಳಿ ಮತ್ತು ನಂತರದ ಲಾಠಿಚಾರ್ಜ್ ಖಂಡಿಸಿ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ, ಎನ್.ಆರ್.ಪುರ, ಮತ್ತು ಶೃಂಗೇರಿ ತಾಲೂಕುಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ಅಂಗಡಿ-ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಾಳೆಹೊನ್ನೂರಿನ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ.

LEAVE A REPLY

Please enter your comment!
Please enter your name here