Tuesday, January 14, 2025
Homeಚಿಕ್ಕಮಗಳೂರುಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಶಾಲಾ ವಾಹನ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಶಾಲಾ ವಾಹನ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳಿದ್ದ ವ್ಯಾನ್ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳಿಗೆ ಗಾಯಗೊಂಡ ಘಟನೆ ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್‌ನ ಬಳಿ ಸಂಭವಿಸಿದೆ.
ಮೈಸೂರಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿಗಳು ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಸರ್ಕಾರಿ ಬಸ್‍ನಲ್ಲಿ ಚಿಕ್ಕಮಗಳೂರಿಗೆ ಬಂದಿದ್ದು, ಅಲ್ಲಿಂದ ಮುಳ್ಳಯ್ಯನಗಿರಿಗೆ ಟ್ರ್ಯಾಕ್ಸ್ ಮಾಡಿಸಿಕೊಂಡು ಹೊರಟಿದ್ದರು. ಈ ವೇಳೆ, ಕೈಮರದ ಬಳಿ ಟ್ರ್ಯಾಕ್ಸ್‌ನ ಟೈರ್ ಸ್ಫೋಟಗೊಂಡಿದೆ. ಪರಿಣಾಮ 12 ಮಕ್ಕಳಲ್ಲಿ 5 ಮಕ್ಕಳು ಗಾಯಗೊಂಡಿದ್ದಾರೆ.
ಬಳಿಕ ಮಕ್ಕಳನ್ನು ಬೇರೆ ವಾಹನದಲ್ಲಿ ಕರೆದುಕೊಂಡು ಹೋಗಲಾಗಿದೆ. ಮುಳ್ಳಯ್ಯನಗಿರಿಯ ಎತ್ತರದ ಪ್ರದೇಶದಲ್ಲಿ ಈ ಘಟನೆಯಾಗಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು. ಅದೃಷ್ಟವಶಾತ್ ಕೆಳಗೆ ಈ ಅವಘಡ ಸಂಭವಿಸಿ, ದುರ್ಘಟನೆಯೊಂದು ತಪ್ಪಿದಂತಾಗಿದೆ.

RELATED ARTICLES
- Advertisment -
Google search engine

Most Popular