ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ವಿದೇಶದಿಂದ ಬಂದು ಮತ ಚಲಾಯಿಸಿ ದಂಪತಿ ಗಮನ ಸೆಳೆದರು. ಚಿಕ್ಕಮಗಳೂರಿನ ಕಡೂರು ಪಂಚೇನಹಳ್ಳಿಯ ಸಾಫ್ಟ್ ವೇರ್ ಇಂಜಿನಿಯರ್ ಮಧು ಮತ್ತು ಅವರ ಪತ್ನಿ ಪಿಳ್ಳೇನಹಳ್ಳಿಯ ತನುಶ್ರೀ ದುಬೈನಿಂದ ಬಂದು ಮತ ಚಲಾಯಿಸಿ ಗಮನ ಸೆಳೆದಿದ್ದಾರೆ.
ಮಧು ದುಬೈನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು, ಪತ್ನಿ ತನುಶ್ರೀ ಗೃಹಿಣಿಯಾಗಿದ್ದಾರೆ. ಮಧು ತನ್ನ ತವರೂರಾದ ಮಂಚೇನಹಳ್ಳಿಯಲ್ಲಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ತನುಶ್ರೀ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ನಮ್ಮ ಮತದಾನದ ಹಕ್ಕು ಚಲಾಯಿಸಲು ದುಬೈನಿಂದ ಬಂದಿದ್ದೇನೆ. ಯುವ ಸಮುದಾಯವೇ ನಮ್ಮ ದೇಶದ ಶಕ್ತಿಯಾಗಿದ್ದು, ಯುವ ಸಮುದಾಯ ಉತ್ಸಾಹದಿಂದ ಮತದಾನ ಮಾಡಬೇಕು ಎಂದು ಅವರು ಹೇಳಿದರು.