ಶಾಲೆಯ ಶೌಚಾಲಯದಲ್ಲೇ ಹೆರಿಗೆ..! ನವಜಾತ ಶಿಶುವನ್ನು ಎಸೆದ ಅಪ್ರಾಪ್ತೆ;

0
42

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ಶಾಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲೇ ಸ್ವಯಂ ಹೆರಿಗೆ ಮಾಡಿಕೊಂಡು, ಬಳಿಕ ನವಜಾತ ಶಿಶುವನ್ನು ಹೊರಗಡೆ ಎಸೆದಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.

ಮಾಹಿತಿಯ ಪ್ರಕಾರ, ಬೆಳಗ್ಗೆ ಶಾಲಾ ಅವಧಿ ಆರಂಭವಾಗುವ ಮುನ್ನ ವಿದ್ಯಾರ್ಥಿನಿ ಶೌಚಾಲಯದಲ್ಲಿ ಹೆರಿಗೆ ಮಾಡಿಕೊಂಡಿದ್ದಾಳೆ. ಬಳಿಕ ಮಗುವನ್ನು ಶಾಲೆಯ ಹಿಂಭಾಗದ ಪ್ರದೇಶಕ್ಕೆ ಎಸೆದಿರುವುದು ತಿಳಿದುಬಂದಿದೆ. ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ತೆರಳಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಶಾಲಾ ಮುಖ್ಯಸ್ಥರು ಪೊಲೀಸ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿನಿಯಿಂದ ಮಾಹಿತಿ ಸಂಗ್ರಹಿಸಿದ್ದಾರೆ.

ಪ್ರಾಥಮಿಕ ವಿಚಾರಣೆಯಲ್ಲಿ ವಿದ್ಯಾರ್ಥಿನಿ ಗರ್ಭಿಣಿಯಾಗಲು ಆಕೆಯ ಸಂಬಂಧಿಯೊಬ್ಬ ಕಾರಣ ಎಂಬ ಮಾಹಿತಿ ಹೊರಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ.

LEAVE A REPLY

Please enter your comment!
Please enter your name here