ದಾವಣಗೆರೆ-ನವಂಬರ್, ವಿದ್ಯಾರ್ಥಿಗಳು ಶಿಕ್ಷಣದ ಕಾಳಜಿ ಯೊಂದಿಗೆ ಈ ಹಂತದಲ್ಲಿ ಮಾನಸಿಕವಾಗಿ ಪೂರ್ಣ ಪ್ರಮಾಣದಲ್ಲಿ ಸಿದ್ದರಾಗಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದೊಂದಿಗೆ ಈ ಪವಿತ್ರವಾದ ವಿದ್ಯಾ ಸಂಸ್ಥೆಗೆ, ತಂದೆ- ತಾಯಿಗಳಿಗೆ ದಾವಣಗೆರೆಗೆ ಒಳ್ಳೆಯ ಹೆಸರು ತರಬೇಕು. ಮಕ್ಕಳು ಮೊಬೈಲ್ ದೂರವಿಟ್ಟು ಶಿಕ್ಷಣದ ಜೊತೆಗೆ ನಮ್ಮ ಸಂಸ್ಕೃತಿ, ಸಂಸ್ಕಾರ ರೂಢಿಸಿ ಕೊಳ್ಳಬೇಕು ಎಂದು ದಾವಣ ಗೆರೆಯ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ. ವಾಮದೇವಪ್ಪ ತಮ್ಮ ಮನದಾಳದ ಮಾತು ವ್ಯಕ್ತಪಡಿಸಿದರು. ದಾವಣಗೆರೆಯ ಶ್ರೀ ತರಳಬಾಳು ಜಗದ್ಗುರು ಪ್ರೌಢಶಾಲೆಯ ಅನುಭವ ಮಂಟಪದ ಸಭಾಂಗಣದಲ್ಲಿ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಾಗಾರ ಸಮಾರಂಭವನ್ನು ಜ್ಯೋತಿ ಬೆಳಗುವುದ ರೊಂದಿಗೆ ಉದ್ಘಾಟಿಸಿ ಬಿ.ವಾಮದೇವಪ್ಪ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ತರಳಬಾಳು ಜಗದ್ಗುರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರವಿ ಕುಮಾರ್ ಹೆಚ್.ಎಸ್. ಮಾತನಾಡಿ, ಮಕ್ಕಳ ಈ ಶಿಕ್ಷಣದ ಹಂತ ಜೀವನದ ಸಾಧನೆಗಳಿಗೆ ಒಂದು ತಿರುವು ಸಹಜವಾಗಿ ಚಿಕ್ಕ ಮಕ್ಕಳಿದ್ದಾಗ ಆಟೋಟ, ಕುಚೇಷ್ಟೆ ಸಹಜ, ಸರ್ವೆ ಸಾಮಾನ್ಯ ಅದರೆ ಈಗ ತುಂಬಾ ಗಂಭೀರವಾಗಿ ಶಿಕ್ಷಣದ ಕಡೆಗೆ ಗಮನ ಕೊಟ್ಟು ಧೈರ್ಯದೊಂದಿಗೆ ತಂದೆ-ತಾಯಿಗಳ ಕನಸು ನನಸು ಮಾಡಬೇಕು ಎಂದರು.
ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ಕಾರ್ಯಾಗಾರ ನಡೆಸಿಕೊಟ್ಟು ಪ್ರತಿಜ್ಞಾವಿಧಿ ಬೋಧಿಸಿದರು. ವೇದಿಕೆಯಲ್ಲಿ ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕ ರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ, ಡಿ.ಸಿ.ಎಂ. ಶಾಖೆಯ ಅಧ್ಯಕ್ಷ ರಾದ ಶ್ರೀಮತಿ ಶಾರದಮ್ಮ ಶಿವನಪ್ಪ, ಸಿದ್ದವೀರಪ್ಪ ಬಡಾವಣೆಯ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕಲ್ಲೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಕನ್ನಡ ನಾಡು, ನುಡಿಯ ಸಾಮೂಹಿಕ ಪ್ರಾರ್ಥನೆ ಯೊಂದಿಗೆ ಪ್ರಾರಂಭವಾದ ಈ ಸಮಾರಂಭದಲ್ಲಿ ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಸ್ವಾಗತಿಸಿ, ಅಚ್ಚುಕಟ್ಟಾಗಿ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.

