ಮೂಲ್ಕಿ: ಶಿಕ್ಷಣದಿಂದ ಸ್ವತಂತ್ರರಾಗಿರಿ ಎಂ. ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಂದೇಶದಲ್ಲಿ ಸಮಾಜದ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಐ ಎ ಎಸ್, ಐ ಪಿ ಎಸ್ ನಂತಹ ಉನ್ನತ ಸ್ಥಾನಕ್ಕೇರಲು ಪ್ರಯತ್ನಿಸಬೇಕೆಂದು ಉದ್ಯಮಿ, ಸಮಾಜ ಸೇವಕ ವಾಸು ಪೂಜಾರಿ ಚಿತ್ರಾಪು ಹೇಳಿದರು.
ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಮೂಲ್ಕಿಯ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗ್ರಹದಲ್ಲಿ ಜರಗಿದ ಮೂಲ್ಕಿ ಬಿಲ್ಲವ ಸಂಘದ ವ್ಯಾಪ್ತಿಯ 3 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ ವಹಿಸಿ ಮಾತನಾಡಿ ಮೂಲ್ಕಿ ಬಿಲ್ಲವ ಸಂಘ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ಪ್ರತಿ ವರ್ಷ ಪುಸ್ತಕ ವಿತರಣೆ,ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ಸೇರಿದಂತೆ ಸುಮಾರು 8 ಲಕ್ಷಕ್ಕೂ ಮಿಕ್ಕಿ ಧನ ಸಹಾಯ ನೀಡುತ್ತಿದೆಯೆಂದು ಹೇಳಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಕಟ್ಟಡ ಸಮಿತಿಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಸಾಲ್ಯಾನ್, ಮಾತನಾಡಿ ಮಕ್ಕಳು ನಿರ್ದಿಷ್ಟವಾದ ಗುರಿ ಹಾಗೂ ಛಲದ ಮುಖಾಂತರ ಸಾಧಕರಾಗಬೇಕು. ಸಂಸ್ಕಾರ ಹಾಗೂ ಸಂಸ್ಕೃತಿ ಇದ್ದರೆ ಮಾತ್ರ ಕಲಿತ ವಿದ್ಯೆ ಸಾರ್ಥಕವೆಂದು ಹೇಳಿದರು.ಕೆಎಸ್ ರಾವ್ ನಗರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಮಹಾಬಲ ಸನಿಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಕುಬೆವೂರು, ಕೋಶಾಧಿಕಾರಿ ಕಮಲಾಕ್ಷ ಬಡಗುಹಿತ್ಲು , ಮಹಿಳಾ ಮಂಡಲದ ಅಧ್ಯಕ್ಷೆ ಶಶಿಕಲಾ ಯದೀಶ್ ಅಮೀನ್ ಮತ್ತಿತರರು ಉಪಸ್ಥಿತರಿದ್ದರು. ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.ಸಂಘದ ಅಧ್ಯಕ್ಷ ಎಂ ಪ್ರಕಾಶ್ ಸುವರ್ಣ ಸ್ವಾಗತಿಸಿದರು,ಜಯ ಕುಮಾರ್ ವಂದಿಸಿದರು.ನರೇಂದ್ರ ಕೆರೆಕಾಡು ನಿರೂಪಿಸಿದರು.