ಮಂಗಳೂರು/ಚೆನ್ನೈ : ಹಣದಾಸೆಗೆ ಇಂದಿನ ಕಾಲಘಟ್ಟದಲ್ಲಿ ಏನುಬೇಕಾದರೂ ಮಾಡುತ್ತಾರೆ ಎಂಬುದಕ್ಕೆ ಹಲವು ಘಟನೆಗಳು ಸಾಕ್ಷಿಯಾಗಿದೆ. ಇದೀಗ ಅಂತಹುದೇ ನೀಚ ಕೃತ್ಯವೊಂದು ಬಯಲಾಗಿದೆ. ಇನ್ನೂರೆನ್ಸ್ ಹಣಕ್ಕಾಗಿ ಪಾಪಿ ಮಕ್ಕಳು ತಂದೆಯನ್ನೇ ಹಾವಿನಿಂದ ಕಚ್ಚಿಸಿ ಕೊಲ್ಲಿಸಿದ್ದಾರ. ತಿರುವಲ್ಲೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆರಂಭದಲ್ಲಿ ಇದು ಹಾವು ಕಡಿತದಿಂದ ಸಂಭವಿಸಿದ ಸಾವೆಂದು ಪರಿಗಣಿಸಲಾಗಿತ್ತು. ತನಿಖೆಯ ವೇಳೆ ಸತ್ಯಾಂಶ ಹೊರಬಿದ್ದಿದೆ .
ಸರ್ಕಾರಿ ಶಾಲೆಯೊಂದರಲ್ಲಿ ಪ್ರಯೋಗಾಲಯದ ಸಹಾಯಕರಾಗಿದ್ದ ಇ.ಪಿ ಗಣೇಸನ್ (56) ಕಳೆದ ಅಕ್ಟೋಬರ್‌ನಲ್ಲಿ ಪೋಥತುರ್ಪೇಟೆ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದರು. ಕುಟುಂಬಸ್ಥರು ಹಾವು ಕಡಿ*ತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದರು. ಹಾಗಾಗಿ ಪೊಲೀಸರು ಕೂಡ ಇದು ಆಕಸ್ಮಿಕ ಸಾ*ವು ಅಂತ ಪ್ರಕರಣ ದಾಖಲಿಸಿಕೊಂಡಿದ್ದರು. ಅದ್ಯಾವಾಗ ಇನ್ನೂರೆನ್ಸ್ ಕಂಪನಿ ಹಣ ನೀಡುವ ಪ್ರಕ್ರಿಯೆ ನಡೆಸಿತೋ ಆವಾಗ ಅನುಮಾನ ವ್ಯಕ್ತವಾಗಿದೆ. ವಿಶೇಷ ತನಿಖಾ ತಂಡ ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸಿದಾಗ ಸತ್ಯ ಹೊರಬಂದಿದೆ. ಗಣೇಸನ್ ಹೆಸರಿನಲ್ಲಿ 3 ಕೋಟಿ ರೂಪಾಯಿ ಇನ್ನೂರನ್ಸ್ ಮಾಡಿಸಲಾಗಿತ್ತು. ಇದನ್ನ ತಿಳಿದ ಇಬ್ಬರು ಮಕ್ಕಳು, ಹಾವು ಕಚ್ಚಿಸಿ ಹತ್ಯೆಗೆ 2 ಬಾರಿ ಸಂಚು ರೂಪಿಸಿದ್ದರು. ಮೊದಲ ಪ್ರಯತ್ನ ವಿಫಲವಾಗಿದಕ್ಕೆ 2ನೇ ಬಾರಿ ಇನ್ನೂ ಅತ್ಯಂತ ವಿಷಕಾರಿ ಕಟ್ಟು ಹಾವು ತಂದು ಬೆಳಗಿನ ಜಾವ ಕುತ್ತಿಗೆಗೆ ಕ*ಚ್ಚುವಂತ ಮಾಡಿದ್ದರು.
ಹಾವು ಕಚ್ಚಿದ ನಂತರ ಅದು ಆಕಸ್ಮಿಕ ಘಟನೆಯಂತೆ ಬಿಂಬಿಸಲು ಹಾಗೂ ಸಾಕ್ಷ್ಯ ನಾಶ ಮಾಡಲು ಪ್ರಯತ್ನಿಸಿದ್ದರು. ಆಸ್ಪತ್ರೆಗೆ ಸಾಗಿಸುವ ನಾಟಕವಾಡಿ ವಿಳಂಬ ಮಾಡಿದ್ದರು. ಇದೆಲ್ಲವೂ ತನಿಖೆ ವೇಳೆ ಬಯಲಾಗಿದೆ. ಸದ್ಯ ಪ್ರಕರಣ ಸಂಬಂಧ ಇಬ್ಬರು ಪುತ್ರರು ಸೇರಿದಂತೆ 6 ಜನರನ್ನ ಬಂಧಿಸಿದ್ದಾರೆ .

