Saturday, December 14, 2024
HomeUncategorizedಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಮಕ್ಕಳ ದಿನಾಚರಣೆ

ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಮಕ್ಕಳ ದಿನಾಚರಣೆ

ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಮಕ್ಕಳ ದಿನಾಚರಣೆಯನ್ನು ಈ ಬಾರಿ ದಕ್ಷಿಣ ಕನ್ನಡ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೆಎಸ್ ರಾವ್ ನಗರ ಕಾರ್ನಾಡ್ (ತಾಲೂಕಿನ ಏಕೈಕ ಪಿಎಂಶ್ರೀ ) ಶಾಲೆಯ ವಿದ್ಯಾರ್ಥಿಗಳಲ್ಲಿ ವಿವಿಧ ಆಟೋಟ ಸ್ಪರ್ಧೆಯನ್ನು ಏರ್ಪಡಿಸಿ ಅದರಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನಗಳನ್ನು ವಿತರಿಸಲಾಯಿತು ಅಲ್ಲದೆ ಎಲ್ಲಾ ಮಕ್ಕಳಿಗೂ ಸಿಹಿ ತಿಂಡಿಯನ್ನು ಹಂಚಲಾಯಿತು ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ನ ಪ್ರಥಮಉಪ ಅಧ್ಯಕ್ಷರಾದ ಪುಷ್ಪರಾಜ್ ಚೌಟ ಮಾತನಾಡಿ ಜವಹರಲಾಲ ನೆಹರು ರವರ ಜನ್ಮದಿನಾಚರಣೆಯನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ನಮ್ಮ ಸಂಸ್ಥೆ ವಿಶೇಷವಾಗಿ ಸರ್ಕಾರಿ ಶಾಲೆ ಶಾಲೆಯ ಏಳಿಗೆಗಾಗಿ ನಮ್ಮಿಂದಾದ ಚಿಕ್ಕ ಸಹಾಯಗಳನ್ನು ನಡೆಸುತ್ತಾ ಬರುತ್ತಿದ್ದು ಇಲ್ಲಿಯ ಮಕ್ಕಳ ಪ್ರತಿಭೆ ಹೊರಹೊಮ್ಮಲು ಅವರಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸುವುದಾಗಿ ಹೇಳಿದರು ವೇದಿಕೆಯಲ್ಲಿ ಪ್ರಾಂತ್ಯ ಅಧ್ಯಕ್ಷರಾದ ವೆಂಕಟೇಶ ಹೆಬ್ಬಾರ್, ಕಾರ್ಯದರ್ಶಿ ಪ್ರತಿಭಾ ಹೆಬ್ಬಾರ್ ನಿಕಟಪೂರ್ವ ಅಧ್ಯಕ್ಷರಾದ ಸುದಿರ್ ಎನ್ ಬಾಳಿಗ, ಶಾಲಾ ಮುಖ್ಯೋಪಾಧ್ಯಾಯರಾದ ದಿನೇಶ್ ಕೆ,ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ, ಶಿಕ್ಷಕಿ ಶ್ರೀದೇವಿ, ಹಿರಿಯ ಶಿಕ್ಷಕರು ಸಹ ಶಿಕ್ಷಕರು ಶಿಕ್ಷಕೇತರರು ಮೊದಲಾದವರು ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular