ಚಿತ್ರದುರ್ಗ : ನಿಯಂತ್ರಣ ತಪ್ಪಿದ ಬೊಲೆರೊ ಮರಕ್ಕೆ ಡಿಕ್ಕಿ , ನಾಲ್ವರು ಮೃತ್ಯು

0
21

ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತಪಟ್ಟವರು ಕಿರಣ್(25), ಅರುಣ್(32), ಹನುಮಂತ(32) ಮತ್ತು ಗಿರಿರಾಜ್(46) ಎಂದು ತಿಳಿದು ಬಂದಿದೆ.

ಇನ್ನುಳಿದ ನಾಲ್ವರು ಕಾರ್ಮಿಕರಿಗೆ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಈ ಕುರಿತು ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here