Monday, May 12, 2025
HomeUncategorizedಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ; ನಾಗಮಂಗಲದಲ್ಲಿ ಹಿಂಸಾಚಾರ; ಸೆ.144 ಜಾರಿ; ಇಂದು ಬಂದ್‌ಗೆ...

ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ; ನಾಗಮಂಗಲದಲ್ಲಿ ಹಿಂಸಾಚಾರ; ಸೆ.144 ಜಾರಿ; ಇಂದು ಬಂದ್‌ಗೆ ಕರೆ

ಮಂಡ್ಯ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ಹಿಂಸಾತ್ಮಕ ಘರ್ಷಣೆ ಸಂಭವಿಸಿದುದರಿಂದ ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ.
ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು, ಇಂದು ಪಟ್ಟಣ ವ್ಯಾಪ್ತಿಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ 46 ಮಂದಿಯನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ನಾಗಮಂಗಲ ಪಟ್ಟಣದ್ಯಾಂತ ಪೊಲೀಸರ ಸರ್ಪಗಾವಲು ಹಾಕಿದ್ದಾರೆ.
ನಾಗಮಂಗಲ ಬಂದ್‌: ಅನ್ಯಕೋಮಿನ ಯುವಕರ ಕೃತ್ಯ ಖಂಡಿಸಿ ಇಂದು ನಾಗಮಂಗಲ ಬಂದ್‌ಗೆ ವಿಶ್ವಹಿಂದೂ ಪರಿಷತ್, ಭಜರಂಗ ದಳ ಹಾಗೂ ಇತರ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.

RELATED ARTICLES
- Advertisment -
Google search engine

Most Popular