ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ 10ನೇ ತರಗತಿಯ ಪಬ್ಲಿಕ್ ಪರೀಕ್ಷೆ ಫಲಿತಾಂಶದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 89 ವಿದ್ಯಾರ್ಥಿಗಳು ಉತ್ತೀರ್ಣರಾದರು.ಸಂಸ್ಥೆಯು 96.73 % ಫಲಿತಾಂಶ ಗಳಿಸಿ ಹೆಬ್ರಿ ತಾಲ್ಲೂಕಿಗೆ ದ್ವಿತೀಯ ಸ್ಥಾನ ಗಳಿಸಿದೆ.
ಪ್ರತ್ಯುಷ್ ಕುಮಾರ್ 615 ಅಂಕ ಪಡೆದು ಸಂಸ್ಥೆಗೆ ಪ್ರಥಮ ಸ್ಥಾನಿಯಾದರು.
ಅನ್ವಿತಾ ನಾಯಕ್ 609 ಅಂಕ ಪಡೆದು ದ್ವಿತೀಯ ಸ್ಥಾನವನ್ನು , ಪೂರ್ವಿ 608 ಅಂಕದೊಂದಿಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 57ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ , 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಮೃತ ಭಾರತಿ ಟ್ರಸ್ಟಿನ ಅಧ್ಯಕ್ಷರು, ಕಾರ್ಯದರ್ಶಿಗಳು, ಸರ್ವ ಪದಾಧಿಕಾರಿಗಳು ,ಅಮೃತ ಭಾರತಿ ಆಡಳಿತ ಮಂಡಳಿಯ ಅಧ್ಯಕ್ಷರು, ಮುಖ್ಯೋಪಾಧ್ಯಾಯರು, ಬೋಧಕ ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.