ಜೂ. 25 ರಂದು ಕಲಾಕುಂಚದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭ

0
19

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಅಂತರಾಷ್ಟಿçÃಯ ಯೋಗ ದಿನಾಚರಣೆ ಪ್ರಯುಕ್ತ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭ ಜೂನ್ 25 ರಂದು ಗುರುವಾರ ಸಂಜೆ 4 ಗಂಟೆಗೆ ಕೆ.ಬಿ. ಬಡಾವಣೆಯ, ಕುವೆಂಪು ರಸ್ತೆ, (ಲಾಯರ್ ರೋಡ್) ಕಸ್ತೂರ್ಬಾ ಬಡಾವಣೆ, ಕಲಾಕುಂಚ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ತಿಳಿಸಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಅಧ್ಯಕ್ಷರಾದ ಲಲಿತಾ ಕಲ್ಲೇಶ್ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷö್ಮಣ್ ರಾಯ್ಕರ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಕಲಾಕುಂಚ ಮಹಿಳಾ ವಿಭಾಗದ ಗೌರವ ಅಧ್ಯಕ್ಷರಾದ ವಸಂತಿ ಮಂಜುನಾಥ್ ಆಗಮಿಸಲಿದ್ದಾರೆ.

ಯೋಗ ಶಿಕ್ಷಕಿಯರಾದ ಲೀಲಾ ಸುಭಾಶ್, ಸಂಧ್ಯಾ ಶ್ರೀನಿವಾಸ್ ವೇದಿಕೆಯಲ್ಲಿ ಇರುತ್ತಾರೆ. ಈ ಉಚಿತ ಯೋಗ ಶಿಬಿರದಲ್ಲಿ ಭಾಗವಹಿಸಿದವರಿಗೆ ಅಭಿನಂದನಾ ಪತ್ರಗಳನ್ನು ವಿತರಿಸಲಾಗುತ್ತದೆ ಎಂದು ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಪ್ರಧಾನ ಕಾರ್ಯದರ್ಶಿ ಸುಮಾ ಏಕಾಂತಪ್ಪ ಪ್ರಕಟಿಸಿದ್ದಾರೆ.

LEAVE A REPLY

Please enter your comment!
Please enter your name here