ಹಲವು ಮಂದಿ ಕಣ್ಮರೆ, ಕೊಚ್ಚಿಹೋದ ಮನೆ, ಹೋಟೆಲ್, ಹೋಂಸ್ಟೇಗಳು
ಉತ್ತರಾಖಂಡ: ಉತ್ತರಾಖಂಡದ ಉತ್ತರಕಾಶಿಯ ರಾಲಿ ಗ್ರಾಮದಲ್ಲಿ ಇಂದು ಭಾರಿ ಮೇಘಸ್ಫೋಟ ಸಂಭವಿಸಿದ್ದು, ಇದರಿಂದಾಗಿ ಭೀಕರ ಭೂಕುಸಿತ ಮತ್ತು ದಿಢೀರ್ ಪ್ರವಾಹ ಉಂಟಾಗಿದೆ. ನೋಡನೋಡುತ್ತಿದ್ದಂತೆ ನದಿಯಲ್ಲಿ ರೌದ್ರಾವತಾರ ತಾಳಿ ಹರಿದುಬಂದ ಭಾರೀ ಪ್ರಮಾಣದ ಕಪ್ಪು ಬಣ್ಣದ ನೀರಿನಿಂದ 25ಕ್ಕೂ ಹೆಚ್ಚು ಹೋಟೆಲ್, ಹೋಂಸ್ಟೇಗಳು ಕೊಚ್ಚಿಹೋಗಿವೆ. ಹಲವಾರು ಜನರು ಕಾಣೆಯಾಗಿದ್ದಾರೆ. ಅವಶೇಷಗಳಡಿ 12ಕ್ಕೂ ಅಧಿಕ ಜನರು ಸಿಲುಕಿದ್ದಾರೆ ಎನ್ನಲಾಗಿದೆ. ಬೆಟ್ಟದ ಇಳಿಜಾರಿನಲ್ಲಿ ಭಾರೀ ಪ್ರಮಾಣದ ನೀರು ಹರಿದು ಬರುವ ಈ ದೃಶ್ಯ ಎಂಥವರ ಎದೆಯನ್ನೂ ನಡುಗಿಸುವಂತಿದೆ. ಇದರಿಂದಾಗಿ ಮನೆಗಳು, ಹೋಸ್ಟೇಗಳು, ಹೋಟೆಲ್ಗಳು ಕೊಚ್ಚಿಕೊಂಡು ಹೋಗಿವೆ.