ಶಾಲೆಯ ಶತಮಾನೋತ್ಸವದ ವೈಭವಕ್ಕೆ ಕೈಜೋಡಿಸಿ : ಹರೀಶ್ ಶೆಟ್ಟಿ
ಪಡುಕುಡೂರು (ಹೆಬ್ರಿ) : ನಮ್ಮ ಶಾಲೆಯು ಶತಮಾನೋತ್ಸವದ ಸಂಭ್ರಮದಲ್ಲಿದ್ದು ಮುಂದೆ ನಡೆಯುವ ಶತಮಾನೋತ್ಸವದ ವೈಭವಕ್ಕೆ ಸರ್ವರೂ ಕೈಜೋಡಿಸಿ ಯಶಸ್ವಿಗೊಳಿಸುವಂತೆ ಸಮಾಜ ಸೇವಕ ಮುಂಬೈ ಉದ್ಯಮಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಪಡುಪರ್ಕಳ ಹರೀಶ ಶೆಟ್ಟಿ ಮನವಿ ಮಾಡಿದರು.
ಅವರು ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಕಾರ್ಕಳ, ಸಮೂಹ ಸಂಪನ್ಮೂಲ ಕೇಂದ್ರ ಮುನಿಯಾಲು ಇದರ ಸಹಯೋಗದಲ್ಲಿ ಗುರುವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.
ಮುಖ್ಯ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಮತ್ತು ಹಳೇ ವಿದ್ಯಾರ್ಥಿ ಸಂಘದ ನೇತ್ರತ್ವದಲ್ಲಿ ನಮ್ಮ ಶಾಲೆಯು ಅತ್ಯುತ್ತಮ ಪ್ರಗತಿ ಸಾಧಿಸುತ್ತಿದೆ. ಎಲ್ಲರ ಶ್ರಮದ ಫಲವಾಗಿಯೇ ನಮ್ಮೂರಿನ ಹೆಸರು ರಾರಾಜಿಸುತ್ತಿದೆ. ನಮ್ಮೂರು ಇನ್ನಷ್ಟು ಅಭಿವೃದ್ಧಿ ಕಾಣುವಂತಾಗಲಿ ಎಂದು ಹರೀಶ ಶೆಟ್ಟಿ ಹೇಳಿದರು.
ಪಡುಕುಡೂರು ಭದ್ರಕಾಳಿ ದೇವಸ್ಥಾನದ ಅರ್ಚಕ ಹಳೇ ವಿದ್ಯಾರ್ಥಿ ರವಿರಾಜ್ ಉಪಾಧ್ಯಾಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಭೆಗೆ ತಕ್ಕ ಬೆಲೆ ಸಿಕ್ಕಾಗ ಪ್ರತಿಭೆಗಳ ವಿಕಸನಗೊಳ್ಳುತ್ತದೆ. ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆಗಳ ವಿಕಸನಕ್ಕೆ ದಾರಿಯಾಗುತ್ತದೆ ಎಂದರು.
ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರತಿಭಾ ಕಾರಂಜಿ ಕಲೋತ್ಸವದ ಮುನ್ನ ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರುಬೀಡು ಎಂ.ಡಿ.ಅಧಿಕಾರಿ ಪುತ್ಥಳಿಗೆ ಪಡುಪರ್ಕಳ ಹರೀಶ ಶೆಟ್ಟಿ ಮಾಲಾರ್ಪಣೆ ಮಾಡಿ ಗೌರವಿಸಿದರು.
ಕೊಡುಗೆ ನೀಡಿ ಕಲ್ಲಬೆಟ್ಟು ದರ್ಕಾಸು ಶಂಕರ ನಾರಾಯಣ ನಾಯಕ್ ಸಹಿತ ಹಲವರನ್ನು ಗೌರವಿಸಲಾಯಿತು.
ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಹರೀಶ ಪೂಜಾರಿ, ಸಮಿತಿಯ ಸದಸ್ಯರು, ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಭಾರವಿ ಶೆಟ್ಟಿ, ಶಿಕ್ಷಣ ಇಲಾಖೆಯ ಸಿಆರ್‌ಪಿ ರಾಘವೇಂದ್ರ ಆಚಾರ್ಯ, ವಿವಿಧ ಪ್ರಮುಖರಾದ ರಮಾನಂದ ಶೆಟ್ಟಿ, ಹೃದಯ ಕುಮಾರ್ ಶೆಟ್ಟಿ, ಶ್ರೀನಿವಾಸ ಆಚಾರ್ಯ, ರವೀಂದ್ರ ಶೆಟ್ಟಿ, ಶಂಕರ ಶೆಟ್ಟಿ ಮಾವಿನಕಟ್ಟೆ, ಭಾಸ್ಕರ ಶೆಟ್ಟಿ, ಉಮಾಶಂಕರ್, ಅಮಿತಾ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯೆ ತಾರಾವತಿ ಶೆಟ್ಟಿ, ಸುಮನಾ ಭಟ್, ಲಕ್ಷ್ಮಿ, ಶಕುಂತಳಾ ಶೆಟ್ಟಿ, ಉಷಾ, ರಂಜಿತಾ ಪೂಜಾರಿ, ವಿವಿಧ ಶಾಲೆಗಳ ಶಿಕ್ಷಕರು, ಶಿಕ್ಷಕರ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಹರೀಶ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿ ಶಿಕ್ಷಕ ಸುದರ್ಶನ್ ಶೆಟ್ಟಿ ನಿರೂಪಿಸಿ ಶಿಕ್ಷಕಿ ಶೃತಿ ಆಚಾರ್ಯ ವಂದಿಸಿದರು.

