ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಸಂತಾಪ

0
48

ಬೆಂಗಳೂರು : ಮಾಜಿ ಸಚಿವ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.ಮಾಜಿ‌ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ , ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಟೊಂಕಕಟ್ಟಿ ನಿಂತು, ಆ ಪ್ರಯತ್ನದಲ್ಲಿ ಕೂಡ ಸಫಲರಾದ ಹುಟ್ಟು ಹೋರಾಟಗಾರ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ ಎಂದು ಹೇಳಿದ್ದಾರೆ. ಬದುಕು ಕೊಟ್ಟ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜಕ್ಕಾಗಿ ದುಡಿದ ಸಾರ್ಥಕ ಜೀವಕ್ಕೆ ಅಂತಿಮ ನಮನಗಳು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here