ಸರ್ಕಾರಿ ಸಭೆ, ಸಮಾರಂಭಗಳಲ್ಲಿ ‘ಪ್ಲಾಸ್ಟಿಕ್ ಬಾಟಲ್ ನೀರು’ ಬಳಸುವಂತಿಲ್ಲ: ಸಿಎಂ ಆದೇಶ

0
78

ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಸದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಆದೇಶ ಹೊರಡಿಸಿರುವಂತ ಅವರು, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್‌ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಸೂಚನೆಗಳನ್ನು ನೀಡಲಾಗಿತ್ತು.
ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಸೂಚಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳು ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ ಸಚಿವಾಲಯವೂ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳ ಸಭೆ, ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆ.ಎಂ.ಎಫ್. ನ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here