ಉಡುಪಿ: ಆರ್ ಎಸ್ ಎಸ್ ನೂರು ವರ್ಷಗಳಿಂದ ಮಾಡುತ್ತಿರುವ ದೇಶ ಕಾರ್ಯ ಹಾಗೂ ದೇಶಕ್ಕೆ ಆಗಿರುವ ಲಾಭವನ್ನು ಗಮನಿಸಬೇಕು. ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಆರ್ ಎಸ್ ಎಸ್ ಮಾಡಿರುವ ಸೇವೆ ಯಾರು ಅಲ್ಲಗಳೆಯಲು ಸಾಧ್ಯವಿಲ್ಲ. ಮುಂದೆಯೂ ಈ ಸೇವಾಕಾರ್ಯ ಮುಂದುವರಿಯುತ್ತದೆ. ಪ್ರಿಯಾಂಕ ರ್ಖಗೆಯವರು ತಮ್ಮ ಅಭಿಪ್ರಾಯವನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ಮುಖ್ಯಮಂತ್ರಿಗಳು ಯೋಗ್ಯ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ ತಿಳಿಸುವ ಹಕ್ಕು ರ್ಖಗೆ ಅವರಿಗೆ ಖಂಡಿತವಾಗಿ ಇದೆ. ಮುಖ್ಯಮಂತ್ರಿಗಳು ಎಲ್ಲರ ಜೊತೆ ವಿಮರ್ಶಿಸಿ ತೀಮಾರ್ನ ತೆಗೆದುಕೊಳ್ಳುತ್ತಾರೆ. ಆರ್ ಎಸ್ ಎಸ್ ತನ್ನ ಹೆಸರಿನಂತೆ ರಾಷ್ಟ್ರೀಯ ಸೇವೆಯನ್ನು ಮಾಡುತ್ತಿದೆ. ವ್ಯವಸ್ಥೆಯಲ್ಲಿ ಕೆಲವು ತಪ್ಪುಗಳಾಗುವುದು ಸಹಜ. ತಪ್ಪುಗಳು ಇದೆಯೋ ಇಲ್ಲವೋ ವಿಮರ್ಶಿಸಬೇಕು. ಒಬ್ಬರಿಗೆ ಸರಿ ಎಂದು ಕಂಡದ್ದು ಮತ್ತೊಬ್ಬರಿಗೆ ತಪ್ಪು ಎಂದೆನಿಸಬಹುದು. ತಪ್ಪುಗಳಿದ್ದರೆ ಸರಿಪಡಿಸುವ ನಿಟ್ಟಿನಲ್ಲಿ ಪ್ರಯತ್ನಿಸಬಹುದು ಎಂದರು.
ನೂರು ವರ್ಷ ಪೂರೈಸಿರುವ ಆರ್ ಎಸ್ ಎಸ್ ಬ್ಯಾನ್ ಮಾಡುವುದು ಸರಿಯಲ್ಲ. ಸರ್ಕಾರ ಎಲ್ಲ ವಿಷಯದಲ್ಲೂ ಲಾಭ ನಷ್ಟವನ್ನು ಗಮನಿಸಬೇಕು. ಸಮಾಜಕ್ಕೆ ಆಗುವ ಲಾಭವನ್ನು ಗಮನಿಸಬೇಕು. ಮೂಗು ಸೋರುತ್ತಿದೆ ಎಂದು ಅದನ್ನು ಕಿತ್ತೆಸೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ಅಯೋಧ್ಯೆಯಲ್ಲಿ ಧ್ವಜಾರೋಹಣ ಸಿದ್ಧತೆ
ನವೆಂಬರ್ 25ರಂದು ಅಯೋಧ್ಯೆಯಲ್ಲಿ ತ್ರಿವರ್ಣ ಧ್ವಜಾರೋಹಣ ನಡೆಯಲಿದೆ. ದೇವಾಲಯದ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ. ಸಮಾರೋಪ ಕಾರ್ಯಕ್ರಮದಲ್ಲಿ ಮಂದಿರವನ್ನು ರಾಮ ದೇವರಿಗೆ ಅರ್ಪಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾ ರೋಹಣ ಮಾಡುತ್ತಾರೆ. ಇದಕ್ಕೆ ಪೂರ್ವಭಾವಿ ಪೂಜಾ ಕಾರ್ಯಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.