ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ಹೇಗೆ ಭರದ ಸಿದ್ಧತೆ ನಡೆದಿದ್ದು ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳು ಪ್ರಬಲ ಅಭ್ಯರ್ಥಿಗಳನ್ನು ಮೂರು ಕ್ಷೇತ್ರಗಳಲ್ಲಿ ಕಣಕ್ಕೆ ಇಳಿಸಿವೆ.ಇದರ ಬದನಲ್ಲೇ ಈ ಒಂದು ಉಪಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು.
ಕೊಟ್ಟೂರಿನ ಉಜ್ಜಯನಿ ಸದ್ದರ್ಮ ಪೀಠಕ್ಕೆ ಆಗಮಿಸಿ ಜಗದ್ಗುರುಗಳಿಂದ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಂತರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರು ರಾಜೀನಾಮೆ ನೀಡುವುದನ್ನು ಯಾವುದೇ ಶಕ್ತಿ ತಡೆ ಯಲಾರದು. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಪೆರೋಲ್ ಮೇಲೆ ಹೊರಗಿದ್ದಾರೆ ಎಂದು ತಿಳಿಸಿದರು.
ಚನ್ನಪಟ್ಟಣದಲ್ಲಿ ರಾಜಕೀಯ ಮೇಲಾಟ ನಡೆದಿದೆ. ಕೊನೆಯ ದಾಗಿ ಮೈತ್ರಿ ಅಭ್ಯರ್ಥಿ ಗೆಲುವಿನ ದಡ ತಲುಪಲಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದವರು ಯೋಗೇಶ್ವರ್ ಅವರನ್ನು ಹರಕೆಯ ಕುರಿ ಮಾಡಲು ಮುಂದಾಗಿದ್ದಾರೆ. ಬಿಜೆಪಿಯವರು ನಿಖಿಲ್ ಕುಮಾರಸ್ವಾಮಿ ವಿಚಾರದಲ್ಲಿ ಆ ರೀತಿ ಮಾಡುವುದಿಲ್ಲ. ಇದನ್ನು ಕಾಂಗ್ರೆಸ್ಸಿಗರು ನೆನಪಿಟ್ಟುಕೊಳ್ಳಲಿ ಎಂದರು.
ಮುಡಾ ಹಗರಣದ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಇದರ ಸತ್ಯಾಸತ್ಯತೆ ಸಿದ್ದರಾಮಯ್ಯ ಅವರ ನಿಜವಾದ ಮುಖವಾಡ ಬಯಲಿಗೆ ತರಲಿದೆ. ಈ ಬಗ್ಗೆ ಜನ ಗಮನ ಹರಿಸದಿರುವಂತೆ ಮಾಡುವ ಪ್ರಯತ್ನವನ್ನು ಉಪಚುನಾವಣೆಯ ಪ್ರಚಾರದ ವೇಳೆ ಮಾಡತೊಡಗಿದ್ದಾರೆ ಎಂದು ಹೇಳಿದರು.