Thursday, September 12, 2024
HomeUncategorizedಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೆ ಸ್ಥಗಿತಗೊಳ್ಳುವುದಿಲ್ಲ, ಅವು ಮುಂದುವರಿಯುತ್ತವೆ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೆ ಸ್ಥಗಿತಗೊಳ್ಳುವುದಿಲ್ಲ, ಅವು ಮುಂದುವರಿಯುತ್ತವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ನಿಲ್ಲುವುದಿಲ್ಲ, ಅವು ಮುಂದುವರೆಯುತ್ತವೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣೆಗೆಯನ್ನ ಸಾಧಿಸಿ ಉತ್ತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು ಜನತೆಯನ್ನುದ್ದೇಶಿಸಿ ಮಾತನಾಡಿದರು.

ಅಭಿವೃದ್ಧಿ ಅಂದರೆ ಕರ್ನಾಟಕ ಮಾದರಿ. 2023ರಲ್ಲಿ ಸ್ಪಷ್ಟ ಬಹುಮತದೊಂದಿಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಳೆದ ಹದಿನೈದು ತಿಂಗಳಿನಲ್ಲಿ ಸ್ಪಷ್ಟ ಹೆಜ್ಜೆಗಳನ್ನ ಇಟ್ಟಿದ್ದೇವೆ. ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ ಎಂದರು.

ಆರ್ಥಿಕ ಅಸಮಾನತೆಯಿಂದ ಬಸವಳಿದಿದ್ದ ಜನರಿಗೆ ಯೋಜನೆಗಳು ನಮ್ಮದಿ ತಂದಿವೆ. ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳಿಂದ 4-5 ಸಾವಿರ ರೂಪಾಯಿ ಪ್ರತಿ ತಿಂಗಳು ಫಲಾನುಭವಿ ಕುಟುಂಬಗಳಿಗೆ ಪ್ರತ್ಯಕ್ಷ, ಪರೋಕ್ಷವಾಗಿ ಲಭಿಸುತ್ತಿದೆ. ಈ ಯೋಜನೆಗಳು ಮುಂದುವರೆಯಲಿವೆ ಎಂದು ಎರಡೆರಡು ಭಾರಿ ಒತ್ತಿ ಹೇಳುವ ಮೂಲಕ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ.

ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ರಾಜ್ಯದ ಜವಾಬ್ದಾರಿಯಾದರೆ, ಅವುಗಳಿಗೆ ಪೂರಕ ಸಂಪನ್ಮೂಲ ಒದಿಗಿಸುವುದು ಕೇಂದ್ರದ ಹೊಣೆಗಾರಿಕೆ. ಇತ್ತೀಚಿನ ಕೆಲ ವರ್ಷಗಳಲ್ಲಿ ಕೇಂದ್ರ ಸರ್ಕಾರ ಈ ಆಶಯದಿಂದ ದೂರ ಸರಿಯುತ್ತಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ. ಸಂವಿಧಾನದ ಆಶಯಗಳನ್ನು ನಿರ್ಲಕ್ಷಿಸಿ ರಾಜ್ಯಗಳಿಗೆ ದೊರೆಯಬೇಕಾದ ಹಣಕಾಸಿನ ಪಾಲನ್ನು ನೀಡಲು ಮೀನಾಮೇಷ ಎಣಿಸುತ್ತಿದೆ. ಕೇಂದ್ರದಿಂದ ಪರಿಹಾರ ಮೊತ್ತ ಪಡೆಯಲು ನ್ಯಾಯಾಲಯದ ಮೊರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಇದು ಜನಹಿತಕ್ಕೆ ಒಳ್ಳೆಯದಲ್ಲ ಎಂದು ಅವರು ಬೇಸರಿಸಿದರು.

RELATED ARTICLES
- Advertisment -
Google search engine

Most Popular