ಮಂಗಳೂರು ನಗರದ ಪ್ರಮುಖ ರಸ್ತೆಯಾದ ಕರಾವಳಿ ಸರ್ಕಲ್‌ನಿಂದ ಪಂಪ್‌ವೆಲ್‌ವರೆಗಿನ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯ ವತಿಯಿಂದ ಸುಮಾರು ರೂ. 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ರಸ್ತೆಯ ಎರಡು ಭಾಗಗಳ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡಿದೆ.
ಇಂದು ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿʼಸೋಜಾ ಅವರು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ, ಉತ್ತಮ ಗುಣಮಟ್ಟದಲ್ಲಿ ರಸ್ತೆ ನಿರ್ಮಾಣಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಈ ರಸ್ತೆಯಲ್ಲಿ ಇನ್ನೂ ಬಾಕಿ ಉಳಿದಿರುವ ವಿದ್ಯುತ್ ದೀಪಗಳ ಅಳವಡಿಕೆ, ರಸ್ತೆಯ ಎರಡೂ ಬದಿಗಳಲ್ಲಿ ಇಂಟರ್‌ಲಾಕ್ ಅಳವಡಿಕೆ ಸೇರಿದಂತೆ ಇತರ ಮೂಲಸೌಕರ್ಯ ಕಾಮಗಾರಿಗಳನ್ನು ಸುಮಾರು ರೂ. 40 ಲಕ್ಷ ವೆಚ್ಚದಲ್ಲಿ ಶೀಘ್ರವಾಗಿ ಕೈಗೊಳ್ಳುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರನ್ನು ಭೇಟಿ ಮಾಡಿ ಒತ್ತಾಯಿಸಿದರು. ಯುಜಿಡಿ ಕಾಮಗಾರಿಗಳಿಗೂ ಅನುಕೂಲವಾಗುವ ರೀತಿಯಲ್ಲಿ ಈ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.
ಅದೇ ರೀತಿ, ಬಲ್ಮಠದಿಂದ ಕಂಕನಾಡಿ ಕರಾವಳಿ ಸರ್ಕಲ್‌ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯು ಬಾಕಿ ಉಳಿದಿದ್ದು, ಮಹಾತ್ಮ ಗಾಂಧಿ ಯೋಜನೆಯಡಿ ಸುಮಾರು ರೂ. 1.21ಕೋಟಿ ವೆಚ್ಚದಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ತಿಳಿಸಿದರು.
ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಗಳೂರು ನಗರದ 60 ವಾರ್ಡ್‌ಗಳ ಅಭಿವೃದ್ಧಿಗಾಗಿ ಸುಮಾರು ರೂ. 400 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಪ್ರಮುಖ ರಸ್ತೆಗಳ ಅಭಿವೃದ್ಧಿ, ವಾರ್ಡ್‌ಗಳ ಒಳರಸ್ತೆಗಳ ಸುಧಾರಣೆ, ಚರಂಡಿ, ಒಳಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಹಾಗೂ ತಡೆಗೋಡೆ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಅನುದಾನ ಮೀಸಲಿಡಲಾಗಿದೆ. ಈ ಕಾಮಗಾರಿಗಳಿಗೆ ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ.
ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪ್ರಾರಂಭಿಸಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು.
ಈ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಗತ್ಯ ಅನುದಾನ ಒದಗಿಸಿದ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್ ಮತ್ತು ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರಿಗೆ ಐವನ್ ಡಿʼಸೋಜಾ ಅವರು ಧನ್ಯವಾದಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ PWD ಇಂಜಿನಿಯರ್ ಹೇಮಂತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ (MCC) ಜೂನಿಯರ್ ಇಂಜಿನಿಯರ್ ಮಂಜುನಾಥ್, ಮಾಜಿ ಕಾರ್ಪೊರೇಟರ್‌ಗಳಾದ ನವೀನ್ ಡಿ’ಸೋಜಾ, ಅಪ್ಪಿ ಎಸ್, ಶೈಲಜಾ, ನಾಗೇಂದ್ರ ಕುಮಾರ್, ಸತೀಶ್ ಪೆಂಗಲ್ ಹಾಗೂ ಭಾಸ್ಕರ್ ರಾವ್, ಕಾಂಗ್ರೆಸ್ ಪಕ್ಷದ ನಾಯಕರಾದ ಮನು ರಾಜ್, ಎನ್.ಪಿ., ಚಂದ್ರಹಾಸ್ ಪೂಜಾರಿ ಕೋಡಿಕಲ್, ಇಮ್ರಾನ್ ಎ.ಆರ್, ನೀತು ಡಿ’ಸೋಜಾ, ಹರ್ಬಟ್ ಡಿ’ಸೋಜಾ, ಮನೀಶ್ ಬೋಳಾರ್, ಜೇಮ್ಸ್ ಪ್ರವೀಣ್, ಉಪೇಂದ್ರ, ಅನಿಲ್ ಕುತ್ಕೋರಿಗುಡ್ಡೆ, ಶ್ರೀಧರ್ ಜಪ್ಪಿನಮೊಗೇರು, ನವಾಜ್ ಜೆಪ್ಪು, ವಿಲ್ಫಿ ಹಾಗೂ ಯುವ ಕಾಂಗ್ರೆಸ್ ನಾಯಕರಾದ ಬಶೀರ್ ಅವರು ಉಪಸ್ಥಿತರಿದ್ದರು.

