1998ರ ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಿದ್ದಿಕಿ ರಾಜ್ನನ್ನು ವಿಜಯಪುರದಲ್ಲಿ ಬಂಧಿಸಲಾಗಿದೆ. ತಮಿಳುನಾಡಿನಿಂದ ತಲೆಮರೆಸಿಕೊಂಡಿದ್ದ ಸಿದ್ದಿಕಿ ರಾಜ್, ವಿಜಯಪುರದಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ. ಕೊಯಮತ್ತೂರು ಪೊಲೀಸರು ಆತನನ್ನು ಬಂಧಿಸಿದ್ದು, ಕೋಮು ಗಲಭೆ ಮತ್ತು ಹತ್ಯೆಗೆ ಸಂಬಂಧಿಸಿದ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.