ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ

0
13

ಕಲ್ಲಡ್ಕ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ ಸಮುದಾಯ ದತ್ತ ಕಾರ್ಯಕ್ರಮ ಏಪ್ರಿಲ್ 10 ಶುಕ್ರವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಸಿಂಗೇರಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಶಾಲೆಯ ಶೈಕ್ಷಣಿಕ ಬೆಳವಣಿಗೆ ಪೋಷಕರ ಮತ್ತು ಶಿಕ್ಷಕರ ನಡುವಿನ ಸಂಬಂಧವು ಹೆಚ್ಚು ಪರಿಣಾಮವನ್ನು ಉಂಟುಮಾಡುತ್ತದೆ, ಆದುದರಿಂದ ಪೋಷಕರು ಶಾಲೆಯೊಂದಿಗೆ ನಿಕಟ ಸಂಪರ್ಕದಲ್ಲಿರಬೇಕು ತಿಳಿಸಿ ಸರಕಾರವು ಜಾರಿಗೆ ತಂದ ದ್ವಿ ಬಾಷಾ ಕಾರ್ಯಕ್ರಮದ ಬಗ್ಗೆ, ಹಾಗೂ ಮಕ್ಕಳ ದಾಖಲಾತಿ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲಾಯಿತು.

ರಜೆಯಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ವಹಿಸುವ ಬಗ್ಗೆ ಹಾಗೂ ಶಿಕ್ಷಕರು ಗಣತಿಯ ನಿಮಿತ್ತ ಮನೆಮನೆ ಭೇಟಿ ನೀಡಲಿರುವ ಕಾರಣ ಪೋಷಕರು ಸಹಕರಿಸಬೇಕೆಂದು ಮನವಿ ಮಾಡಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವನಿತಾ, ಉಪಸ್ಥಿತರಿದ್ದರು.

ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು, ಮಕ್ಕಳ ಪೋಷಕರು ಶಾಲಾ ಶಿಕ್ಷಕ ವೃಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಆಗ್ನೇಸ್ ಮೆಂಡೋನ್ಸಾ ಸ್ವಾಗತಿಸಿದರು ಸಹ ಶಿಕ್ಷಕ ತೌಸೀಫ್ ಅಹಮದ್ ವಂದಿಸಿದರು. ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ಹಾಗೂ ಶಿಕ್ಷಕ ವೃಂದ ಸಹಕರಿಸಿದರು.

LEAVE A REPLY

Please enter your comment!
Please enter your name here