ಶಾಸಕ ಗುರುರಾಜ್ ಗಂಟಿಹೊಳೆ ಭೂ ಸುರಕ್ಷಾ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿ ಎಲ್ಲಾ ದಾಖಲೆಗಳು ಆನ್ ಲೈನ್ ಮೂಲಕ ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಾಗಿಸುವ ಯೋಜನೆ ಇದಾಗಿದೆ ಸಾರ್ವಜನಿಕರಿಗೆ ಸುಮಾರು 150 ವರ್ಷಗಳ ಹಳೆಯ ದಾಖಲೆಗಳು ಸ್ಕ್ಯಾನ್ ಆಗಿ ಕಂಪ್ಯೂಟರೀಕರಣಗೊಂಡು ಆನ್ ಲೈನ್ ನಲ್ಲಿ ಲಭ್ಯವಾಗಲಿವೆ. ಈ ದಾಖಲೆಗಳನ್ನು ಸಂಬಂಧಿಸಿದ ಕಚೇರಿಗಳಿಗೆ ಹೋಗದೆ ಇಂದು ಆರ್.ಟಿ.ಸಿ ಪಹಣಿಯನ್ನು ಆನ್ಲೈನ್ ನಲ್ಲಿ ಪಡೆಯುವ ವ್ಯವಸ್ಥೆಯಂತೆ ಮನೆಯಲ್ಲೇ ಕುಳಿತು ನೋಡಲು, ಮುದ್ರಿಸಿಕೊಳ್ಳಲು ಹಾಗೂ ದೃಢೀಕೃತ ಪ್ರತಿಗಳನ್ನು ಪಡೆಯಲು ಅವಕಾಶವಾಗಲಿದೆ ಎಂದರು.
ಈ ಸಮಾರಂಭದಲ್ಲಿ ಬೈಂದೂರು ತಾಲೂಕಿನ ತಹಶೀಲ್ದಾರ್ ಭೀಮಸೇನ ಕುಲಕರ್ಣಿ ಹಾಗೂ ಉಪತಹಶೀಲ್ದಾರ್ ರಮೇಶ್ ಆರ್ ಜೆ ಹಾಗೂ ವಿಷಯ ನಿರ್ವಾಹಕರಾದ ಮನೋಹರ್ ಜಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.