ಬೈಂದೂರು:ಉಡುಪಿ,ಕಾರ್ಕಳ,ಕಾಪು,ಹೆಬ್ರಿ ತಾಲೂಕುಗಳಲ್ಲಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಜಯಪ್ರಕಾಶ್ ಹೆಗ್ಡೆ ಹೇಳಿದರು.
ತಮ್ಮ ಸ್ವಗೃಹದಲ್ಲಿ ಗುರುವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ,ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ತನ್ನ ಒಡನಾಡಿಗಳು ಹಾಗೂ ಕ್ಷೇತ್ರದ ಜನರು ಈಗಾಲೇ ಅಭೂತ ಪೂರ್ವ ಬೆಂಬಲವನ್ನು ವ್ಯಕ್ತಪಡಿಸಿರುವ ಕುರಿತು ಸಂತೋಷವನ್ನು ಹಂಚಿಕೊಂಡ ಜಯಪ್ರಕಾಶ್ ಹೆಗ್ಡೆ ಅವರು ರಾಜಕೀಯ ಕ್ಷೇತ್ರ ಎನ್ನುವುದು ಉದ್ಯಮವಲ್ಲ ಸಾಮಾಜಿಕ ಕೆಲಸಗಳನ್ನು ಮಾಡಲು ಜನರು ನೀಡುವ ಒಂದು ಉತ್ತಮವಾದ ಅವಕಾಶವಾಗಿದೆ ಅದನ್ನು ಸಮರ್ಥವಾಗಿ ಉಪಯೋಗಿಸಿಕೊಂಡು ಕ್ಷೇತ್ರದ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದನೆ ನೀಡುವುದಾಗಿ ಹೇಳಿದರು.
ನಾನು ಯಾರ ಬಗ್ಗೆಯೂ ದೂಷಣೆ ಮಾಡುವುದಿಲ್ಲ ಎಲ್ಲರೂ ನನಗೆ ಸ್ನೇಹಿತರು,ನನ್ನ ಬಗ್ಗೆ ಕ್ಷೇತ್ರದ ಜನರಿಗೆ ಅರಿವು ಇದೆ ಎಂದರು.