ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡಾ ಮೂಡುಬಿದಿರೆ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಶ್ರೀ ತುಳಸಿ ಸಂಜೀವಿನಿ ಒಕ್ಕೂಟ ಶಿರ್ತಾಡಿ ಹಾಗೂ ಗ್ರಾಮ ಪಂಚಾಯತ್ ಶಿರ್ತಾಡಿ ಇವರ ಜಂಟಿ ಆಶ್ರಯದಲ್ಲಿ 5 ದಿನಗಳ ಉಚಿತ ಸೀರೆ ಗೊಂಡೆ ಹಾಕುವ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ಶಿರ್ತಾಡಿ ಸಂಜೀವಿನಿ ಕಟ್ಟಡ ಸಭಾಂಗಣದಲ್ಲಿ ನಡೆಯಿತು.
ತರಬೇತಿ ಪಡೆದ ಮಹಿಳೆಯರು ಪ್ರಯೋಜನದ ಬಗ್ಗೆ ತಿಳಿಸಿದರು. ತರಬೇತಿ ನೀಡಿದ ಶುಭ ಲಕ್ಷ್ಮಿ ತರಬೇತಿಯಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ನಂತರ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಯೋತಿ ರಾಜ್ ಮಹಿಳೆಯರು ಸ್ವ ಉದ್ಯೋಗ ಮಾಡಲು ಹೆಚ್ಚಿನ ಕೌಶಲ್ಯದ ಅಗತ್ಯವಿದ್ದು VRDF ಮಹಿಳೆಯರಿಗೆ ಬೇಕಾದ ತರಬೇತಿ ಹಾಗೂ ಬೆಂಬಲ ನೀಡಲು ಸದಾ ಸಿದ್ದವಿದೆ ಎಂದು ತಿಳಿಸಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ತರಬೇತಿ ನಂತರ ಮಹಿಳೆಯರು ಸ್ವ ಉದ್ಯೋಗ ಮಾಡಲು ಪ್ರೇರೇಪಿಸಿದರು. ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ ಶಿರ್ತಾಡಿ ಪಂಚಾಯತ್ ಅಧ್ಯಕ್ಷರಾದ ಅಗ್ನೇಶ್ ಡಿಸೋಜಾ ಮಾತಾಡುತ ತರಬೇತಿಯಿಂದ ಮಹಿಳೆಯರಲ್ಲಿ ಸಕಾರಾತ್ಮಕ ಬದಲಾವಣೆ ಬಂದಿದೆ, ಇನ್ನೂ ಹೆಚ್ಚಿನ ತರಬೇತಿ ಸಂಜೀವಿನಿ ಕಟ್ಟಡದಲ್ಲಿ ನಡೆದು ಹೆಚ್ಚಿನ ಮಹಿಳೆಯರಿಗೆ ಪ್ರಯೋಜನಸಿಗಲಿ ಎಂದರು. ತಾಲೂಕು ಸಂಯೋಜಕರಾದ ನಿಖಿಲ್, ತುಳಸಿ ಒಕ್ಕೂಟದ ಅಧ್ಯಕ್ಷರಾದ ಸವಿತ ವೇದಿಕೆಯಲ್ಲಿದ್ದರು. ಸುಗಂಧಿ ಸ್ವಾಗತಿಸಿ ಜ್ಯೋತಿ ಧನ್ಯವಾದಗೈದರು. ದಿವ್ಯ ಕಾರ್ಯಕ್ರಮ ನಿರೂಪಿಸಿದರು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರಿಗೆ ಪ್ರಮಾಣಪತ್ರ ನೀಡಲಾಯಿತು.
ವರದಿ ರಾಯಿ ರಾಜಕುಮಾರ ಮೂಡುಬಿದಿರೆ