ಶಿರ್ವದಲ್ಲಿ ನಡೆದ 5 ಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ

0
2

ಶಿರ್ವದಲ್ಲಿ ನಡೆದ 5 ಶಾಲೆಗಳ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪವು ಶಾಸಕರಾದ ಗುರ್ಮೆ ಸುರೇಶ ಶೆಟ್ಟಿಯವರ ಉಪಸ್ಥಿತಿಯಲ್ಲಿ ಜರಗಿತು.

ಪಾಲುಗೊಂಡ ಶಾಲೆಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ವಿದ್ಯಾರ್ಥಿಗಳು ಯಕ್ಷಶಿಕ್ಷಣದ ತಮ್ಮ ಅನುಭವವನ್ನು ಹಂಚಿಕೊಂಡರು. ಸಮಾರಂಭದಲ್ಲಿ ವಿದ್ಯಾವರ್ಧಕ ಸಂಘ, ಶಿರ್ವ ಇದರ ಆಡಳಿತಾಧಿಕಾರಿಗಳಾದ ಪ್ರೊ.ವೈ.ಭಾಸ್ಕರ ಶೆಟ್ಟಿ, ಯಕ್ಷಗಾನ ಕಲರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಉಪಾಧ್ಯಕ್ಷ ವಿ.ಜಿ.ಶೆಟ್ಟಿ, ವೆಂಕಟೇಶ್ ಕಾಮತ್,ಶ್ರೀಪತಿ ಕಾಮತ್ ಉಪಸ್ಥಿತರಿದ್ದರು.ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ನಿರ್ವಹಿಸಿದ ಕಾರ್ಯಕ್ರಮದ ಕೊನೆಗೆ ಅನಂತ ಮೂಡಿತ್ತಾಯರು ಧನ್ಯವಾದ ಸಲ್ಲಿಸಿದರು.