ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಂತಾಪ

0
50


ಸಾಲುಮರದ ತಿಮ್ಮಕ್ಕ ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಗಿಡ-ಮರಗಳನ್ನು ಬೆಳೆಸುವುದರೊಂದಿಗೆ ಪರಿಸರ ಸಂರಕ್ಷಣೆ ಬಗ್ಯೆ ವಿಶೇಷ ಕಾಳಜಿವಹಿಸುತ್ತಿದ್ದ ಅವರು ರಾಜ್ಯದೆಲ್ಲೆಡೆ ಸಂಚರಿಸಿ ಪರಿಸರ ಸಂರಕ್ಷಣೆ ಬಗ್ಯೆ ಅರಿವು, ಜಾಗೃತಿ ಮೂಡಿಸುತ್ತಿದ್ದರು.
ಮಾಗಡಿ ತಾಲ್ಲೂಕಿನಲ್ಲಿ ರಸ್ತೆ ಬದಿ ೩೮೫ ಆಲದ ಮರಗಳನ್ನು ನೆಟ್ಟು ಬೆಳೆಸಿದ ಅವರು ಸಾಲುಮರದ ತಿಮ್ಮಕ್ಕ ಎಂದೇ ಚಿರಪರಿಚಿತರಾದರು. ಸಸಿಗಳನ್ನು ಮಕ್ಕಳಂತೆ ಪ್ರೀತಿಯಿಂದ ಸಾಕಿ ಸಲಹಿದ್ದಾರೆ.
ರಾಜ್ಯದೆಲ್ಲೆಡೆ ಸಂಚರಿಸಿ ಪರಿಸರ ಸಂರಕ್ಷಣೆ ಬಗ್ಯೆ ಅವರು ಜಾಗೃತಿ ಮೂಡಿಸಿದ್ದಾರೆ.
೨೦೧೪ ರ ಆಗೋಸ್ತು ೧೮ ರಂದು ಅವರು ಧರ್ಮಸ್ಥಳಕ್ಕೆ ಬಂದು ಪರಿಸರದ ಸಂರಕ್ಷಣೆ ಬಗ್ಯೆ ಮಾತುಕತೆ ನಡೆಸಿದ್ದರು.
ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಿದ ನೆನಪು ಇನ್ನೂ ಸ್ಮರಣೀಯವಾಗಿದೆ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ.

(ಡಿ. ವೀರೇಂದ್ರ ಹೆಗ್ಗಡೆಯವರು)

LEAVE A REPLY

Please enter your comment!
Please enter your name here