ಮಂಗಳೂರು: “ನಾನು ಯಾವಾಗಲೂ ನ್ಯಾಯ, ಸತ್ಯವನ್ನು ನಂಬಿದವನು. ಪ್ರತಿಯೊಬ್ಬರನ್ನೂ ಅವರ ಹಿನ್ನೆಲೆಯನ್ನು ಪರಿಗಣಿಸದೇ ಗೌರವಿಸಬೇಕು ಎಂಬ ವಿಚಾರದಲ್ಲಿ ನಂಬಿಕೆ ಇಟ್ಟವನು. ಆದರೆ ಈಗ ಹಿಂದುಳಿದ ವರ್ಗದ ಸಮುದಾಯಗಳನ್ನು ರಕ್ಷಿಸಲು ಇರುವ ಕಾನೂನನ್ನು ನನ್ನ ವಿರುದ್ಧ ಸುಳ್ಳು ಆರೋಪ ಮಾಡಲು ಬಳಸಿರುವುದು ತೀವ್ರ ಬೇಸರ ತಂದಿದೆ ಎಂದು
ಇನ್ಫೋಸಿಸ್ ಸಹ-ಸಂಸ್ಥಾಪಕ ಮತ್ತು ಐಐಎಸ್ಸಿ ಮಂಡಳಿ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್ ಹೇಳಿದ್ದಾರೆ.
ಕ್ರಿಸ್ ಮತ್ತು ಇತರ 17 ಮಂದಿ ಪ್ರಾಧ್ಯಾಪಕರ ವಿರುದ್ದದ ತನಿಖೆಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಮತ್ತು ಇತರರ ವಿರುದ್ಧ ಎಸ್‍ಸಿ/ಎಸ್‍ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಇರುವ ಪ್ರಕರಣದ ಕುರಿತಾದ ತನಿಖೆ ಮತ್ತು ವಿಚಾರಣೆಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣವು ನ್ಯಾಯಾಲಯದ ಮುಂದಿರುವ ಕಾರಣ ನಾನು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ನನಗೆ ನ್ಯಾಯಾಂಗದಲ್ಲಿ ಸಂಪೂರ್ಣ ನಂಬಿಕೆಯಿದೆ ಮತ್ತು ನ್ಯಾಯ ಗೆಲ್ಲುತ್ತದೆ ಎಂಬ ನಂಬಿಕೆ ನನ್ನದು” ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
2010 ರಿಂದ 2020 ರವರೆಗಿನ ಘಟನೆಗಳಿಗೆ ಸಂಬಂಧಿಸಿದಂತೆ ಮಾಜಿ ಪೆÇ್ರಫೆಸರ್ ಆರೋಪದ ನಂತರ ಇನ್ಫೋಸಿಸ್ ಸಹ-ಸಂಸ್ಥಾಪಕ ಮತ್ತು ಐಐಎಸ್ಸಿ ಕೌನ್ಸಿಲ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್ ಮತ್ತು 17 ಅಧ್ಯಾಪಕರ ವಿರುದ್ಧ ಎಸ್‍ಸಿ/ಎಸ್‍ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು ಎಂದು ತಿಳಿಸಿದ್ದಾರೆ