ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಮೂಡುಬಿದರೆ ತಾಲೂಕು ಘಟಕದ ವತಿಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವ ಕುಮಾರಿ ಶಾದ್ವಿ ಅವರನ್ನು ಅಭಿನಂದಿಸಲಾಯಿತು. ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿರುವ ಇವರು 622 ಅಂಕ ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

ಇವರು ಪ್ರಭಾಕರ್ ಮತ್ತು ಮಮತಾ ದಂಪತಿಗಳ ಪುತ್ರಿಯಾಗಿರುತ್ತಾರೆ . ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿರುವ ನಾಗರತ್ನ ಶಿರೂರು ವಿದ್ಯಾರ್ಥಿಯ ಸಾಧನೆಯನ್ನು ಗುರುತಿಸಿ ಶುಭ ಹಾರೈಸಿ ಅಭಿನಂದಿಸಿದರು.
ಸಂಘದ ಉಪಾಧ್ಯಕ್ಷ ರಾಗಿರುವ ಸುಧಾಕರ್ ಸಾಲಿಯಾನ್ ರವರು ವಿದ್ಯಾರ್ಥಿನಿಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಪದಾಧಿಕಾರಿಗಳಾಗಿರುವ ಮಹೇಶ್ವರಿ, ರೇಣುಕಾ, ಗೀತಾ, ಪ್ರಶಾಂತ್ ಇವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಸಂಘದ ಕಾರ್ಯದರ್ಶಿ ಮಹೇಶ್ವರಿ ಅವರು ಧನ್ಯವಾದ ಸಲ್ಲಿಸಿದರು.

