Monday, February 10, 2025
Homeಬಂಟ್ವಾಳಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷ ವಾಸು ಪೂಜಾರಿಗೆ ಅಭಿನಂದನೆ

ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷ ವಾಸು ಪೂಜಾರಿಗೆ ಅಭಿನಂದನೆ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷ ವಾಸು ಪೂಜಾರಿ ಇವರನ್ನು ಅಭಿನಂದಿಸಲಾಯಿತು.

ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಪ್ರೇರಣೆ ಎಂದು ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಾಸು ಪೂಜಾರಿಯವರು ತಿಳಿಸಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಕಾರ್ಯದರ್ಶಿ ಚೇತನ್ ಮುಂಡಾಜೆ, ಉಪಾಧ್ಯಕ್ಷ ನಾರಾಯಣ ಪೂಜಾರಿ ಪಲ್ಲಿಕಂಡ, ನಾಗೇಶ್ ಪೂಜಾರಿ ನೈಬೇಲು, ನಿಕಟಪೂರ್ವ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ, ಮಾಜಿ ಅಧ್ಯಕ್ಷರಾದ ಟಿ.ರಾಮಚಂದ್ರ ಸುವರ್ಣ, ಬಿ.ಶ್ರೀಧರ ಅಮೀನ್, ಪ್ರೇಮನಾಥ್ ಕೆ, ರಾಜೇಶ್ ಸುವರ್ಣ, ಅರುಣ್ ಕುಮಾರ್, ನಾಗೇಶ್ ಪೊನ್ನೋಡಿ, ಗಣೇಶ್ ಪೂಂಜರೆಕೋಡಿ ಮತ್ತಿತರರು ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular