ನೂತನ ಎಸ್‌ಪಿ ಹರಿರಾಮ್ ಶಂಕರ್ ಅವರಿಗೆ ವಕೀಲರ ಸಂಘದ ಕಡೆಯಿಂದ ಅಭಿನಂದನೆ

0
16

ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಶ್ರೀ ಹರಿರಾಮ್ ಶಂಕರ್ ಅವರನ್ನು ಉಡುಪಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ನೇತೃತ್ವದ ನಿಯೋಗವು ಇಂದು ಜೂನ್ ತಾ. 23ರಂದು ಭೇಟಿಯಾಗಿ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿತು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಮತ್ತು ನಗರದ ಸಂಚಾರ ವ್ಯವಸ್ಥೆ ಕಾಪಾಡಲು ವಿಶೇಷ ಆದ್ಯತೆ ನೀಡುವಂತೆ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯು ಬಹಳ ಇಕ್ಕಟ್ಟಾಗಿರುವುದರಿಂದ ಆ ಠಾಣೆಯ ಮೇಲ್ಭಾಗದಲ್ಲಿರುವ ಮಹಿಳಾ ಠಾಣೆಯನ್ನು ಬೇರೆಡೆ ಸ್ಥಳಾಂತರಿಸುವಂತೆ ವಿನಂತಿಸಲಾಯಿತು. ಮತ್ತು ವಕೀಲರ ಸಂಘಕ್ಕೆ ಭೇಟಿ ನೀಡಿ “ಸಂವಾದ ಕಾರ್ಯಕ್ರಮ”ದಲ್ಲಿ ಭಾಗವಹಿಸುವಂತೆಯೂ ಆಹ್ವಾನಿಸಲಾಯಿತು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಎಸ್.ಪಿ.ಯವರು ಅತಿ ಶೀಘ್ರ ವಕೀಲರ ಸಂಘಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ವಕೀಲರ ಸಂಘದ ಪದಾಧಿಕಾರಿಗಳಾದ ಶ್ರೀ ರಾಜೇಶ್ ಎ.ಆರ್., ಶ್ರೀ ಬೈಲೂರು ರವೀಂದ್ರ ದೇವಾಡಿಗ, ಶ್ರೀ ಸಂತೋಷ್ ಮೂಡುಬೆಳ್ಳೆ, ಶ್ರೀ ಜಯಕೃಷ್ಣ ಆಳ್ವ ಮತ್ತು ಶ್ರೀ ಆರೂರು ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here