ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ವಿಭಾಗದ ಅಧ್ಯಕ್ಷರಾಗಿ ಬಳಿಕ ಹಂಪಿ ಕನ್ನಡ ವಿಶ್ವವಿದ್ಯಾಲಯ ಹಾಗೂ ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯಗಳ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಬಹುಶ್ರುತ ವಿದ್ವಾಂಸ ಪ್ರೊ. ಬಿ.ಎ ವಿವೇಕ ರೈ ಅವರಿಗೆ ಕರ್ನಾಟಕ ಸರಕಾರ ನೀಡುವ ಪ್ರತಿಷ್ಠಿತ ಪಂಪ ಪ್ರಶಸ್ತಿ ದೊರಕಿದ ಪ್ರಯುಕ್ತ ಅಭಿವಂದನ ಸಮಾರಂಭ ಏರ್ಪಡಿಸಲಾಗಿದೆ. ಜೂ. 3 ಮಂಗಳವಾರದಂದು ವಿವಿಯ ಡಾ.ಯು.ಆರ್ ರಾವ್ ಸಭಾಂಗಣದಲ್ಲಿ ಬೆಳಗ್ಗೆ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ ಧರ್ಮ ವಹಿಸಲಿದ್ದಾರೆ.
ಜಾನಪದ ವಿದ್ವಾಂಸ, ಕರ್ನಾಟಕ ಜಾನಪದ ವಿವಿ ವಿಶ್ರಾಂತ ಕುಲಪತಿ ಪ್ರೊ. ಕೆ. ಚಿನ್ನಪ್ಪಗೌಡ ಅಭಿನಂದನ ಭಾಷಣ ಮಾಡಲಿದ್ದಾರೆ. ಕುಲಸಚಿವರಾದ ಕೆ.ರಾಜು ಮೊಗವೀರ, ಕೆ.ಎ.ಎಸ್ ಇವರು ಶುಭಾಶಂಸನೆ ಮಾಡಲಿದ್ದಾರೆ ಎಂದು ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ ಸೋಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.