ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಆಯೋಜಿಸಿದ್ದ ನೂತನ ಸಂಸದರಿಗೆ ಮತ್ತು ಕೇಂದ್ರ ಸಚಿವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಗೌರವಿಸಲಾಯಿತು.
ರಾಜ್ಯದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಿಂದ ಆಯ್ಕೆಯಾದ 19 ಸಂಸದರನ್ನು ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಹಾಗೂ ಡಿ.ವಿ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ, ಕರ್ನಾಟಕದ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಉಪಸ್ಥಿತರಿದ್ದರು.