ಸೂರತ್: ನಾಮಪತ್ರ ತಿರಸ್ಕೃತಗೊಂಡು ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣರಾದ ನೀಲೇಶ್ ಕುಂಬಾನಿ ಅವರನ್ನು ಕಾಂಗ್ರೆಸ್ ಉಚ್ಛಾಟನೆ ಮಾಡಿದೆ. ಗುಜರಾತ್ ನ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾಗಿದ್ದ ನಿಲೇಶ್ ಕುಂಬಾನಿ ಪಕ್ಷಕ್ಕೆ ಭಾರೀ ಮುಜುಗರವುಂಟು ಮಾಡಿದ್ದರು.
ನೀಲೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಅಮಾನತುಗೊಳಿಸಲು ಕಾಂಗ್ರೆಸ್ ಶಿಸ್ತು ಸಮಿತಿ ನಿರ್ಧರಿಸಿದೆ. ಆ ಪ್ರಕಾರ ಪಕ್ಷದಿಂದ ನೀಲೇಶ್ ಅವರನ್ನು ಆರು ವರ್ಷ ಉಚ್ಛಾಟಿಸಲಾಗಿದೆ.
ಸೂರತ್ ಕ್ಷೇತ್ರದ ಚುನಾವಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಕಾಂಗ್ರೆಸ್ ಚಿಂತಿಸಿದೆ. ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿತ್ತು. ಇನ್ನುಳಿದ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಹಿಂದೆಗೆದುಕೊಳ್ಳುವ ಮೂಲಕ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್ ಅವರ ಅವಿರೋಧ ಆಯ್ಕೆಗೆ ಕಾರಣವಾಗಿತ್ತು.