ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಕಾಂಗ್ರೆಸ್​ ಆಗ್ರಹ

0
14

ಉಡುಪಿ : ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ವಿಂಗಡಣೆ ಮಸೂದೆಗಳನ್ನು ಪ್ರತ್ಯೇಕವಾಗಿ ಮಂಡಿಸಬೇಕು. ಮಹಿಳಾ ಮೀಸಲಾತಿಗೆ ಕಾಂಗ್ರೆಸ್​ ಬೆಂಬಲ ನೀಡಲಿದ್ದು, 2029ರ ಲೋಕಸಭಾ ಚುನಾವಣೆ ವೇಳೆ ಮಹಿಳಾ ಮೀಸಲಾತಿ ಜಾರಿಗೆ ತರದಿದ್ದರೆ ಕಾಂಗ್ರೆಸ್​ ಪ್ರತಿಭಟನೆ ನಡೆಸಲಿದೆ ಎಂದು ಕರ್ನಾಟಕ ರಾಜ್ಯ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರಾದ ಕೃಪಾ ಆಳ್ವ ಆರೋಪಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ 2023ರಲ್ಲಿ ಅಂಗೀಕರಿಸಿದ ಮಹಿಳಾ ಮೀಸಲಾತಿ ಕಾನೂನನ್ನು ಜಾರಿಗೊಳಿಸದೆ ಮಹಿಳೆಯರ ಸಬಲೀಕರಣದ ಹೆಸರಿನಲ್ಲಿ ಕ್ಷೇತ್ರ ಪುನರ್​ ವಿಂಗಡಣೆ ಕಾಯ್ದೆ 2026 ಜಾರಿಗೊಳಿಸಿ, ಆ ಮೂಲಕ ಚುನಾವಣಾ ಕ್ಷೇತ್ರಗಳನ್ನು ತಮ್ಮ ಲಾಭಕ್ಕೆ ತಿರುಗಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಆರೋಪಿಸಿದರು.

ಹೊಸ ಜನಗಣತಿ ಪೂರ್ಣವಾಗದೆ ಕ್ಷೇತ್ರ ಪುನರ್​ ವಿಂಗಡಣೆ ಕಾಯ್ದೆ ಜಾರಿಗೊಳಿಸಿದರೆ ದಕ್ಷಿಣ ರಾಜ್ಯಗಳ ಪ್ರತಿನಿಧಿತ್ವ ಕಡಿಮೆಯಾಗುವ ಸಾಧ್ಯತೆ ಇದೆ. 2011ರ ಜನಗಣತಿ ಆಧಾರದಲ್ಲಿ ಕ್ಷೇತ್ರ ಪುನರ್​ ವಿಂಗಡಣೆ ಕಾಯ್ದೆ ಜಾರಿಗೊಳಿಸುವ ನಿರ್ಧಾರ ಸರಿಯಲ್ಲ ಎಂದು ಹೇಳಿದರು.

ಸರ್ಕಾರ ಪಾರದರ್ಶಕತೆ ತೋರಬೇಕು ಹಾಗೂ ಕ್ಷೇತ್ರ ವಿಂಗಡಣೆ ಬಗ್ಗೆ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಬೇಕು. ಇದಕ್ಕಾಗಿ ಆಯೋಗವನ್ನು ರಚಿಸಬೇಕು. 2023ರ ಮಹಿಳಾ ಮೀಸಲಾತಿ ಕಾನೂನನ್ನು ಯಾವುದೇ ಷರತ್ತಿಲ್ಲದೆ ತಕ್ಷಣ ಜಾರಿಗೆ ತರಬೇಕು. ಆ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯದಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಪರಿಸರ ಮತ್ತು ಪ್ರವಾಸೋದ್ಯಮ ಮಂಡಳಿ ಅಧ್ಯೆ ಶಾಲೆಟ್​ ಪಿಂಟೋ, ಕೆಪಿಸಿಸಿ ವಕ್ತಾರೆ ವೆರೋನಿಕಾ ಕಾರ್ನೆಲಿಯೊ, ಬ್ರಹ್ಮಾವರ ತಾಲೂಕು ಗ್ಯಾರಂಟಿ ಸಮಿತಿ ಅಧ್ಯೆ ಡಾ. ಸುನೀತಾ ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್​ ಅಧ್ಯೆ ಜ್ಯೋತಿ ಹೆಬ್ಬಾರ್​ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here