ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಗೆ ಜೀವಕ್ಕೆ ಅಪಾಯವಿದ್ದು ಏನೇ ಆದರೂ ಅದಕ್ಕೆ ಪೊಲೀಸರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ಇಷ್ಟೇ ಅಲ್ಲದೆ, ಸಾಮಾಜಿಕ ಮಾಧ್ಯಮ ʻಎಕ್ಸ್ʼನಲ್ಲಿ ಸಂದೇಶ ಪ್ರಕಟಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.
ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ ತೆಗೆದುಕೊಂಡ ಕರ್ನಾಟಕ ಪೊಲೀಸರು, ಈಗ ಕಳೆದ ಐದಾರು ಗಂಟೆಗಳಿಂದ ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಸುತ್ತಾಡಿಸುತ್ತಿದ್ದಾರೆ. ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ ತೊಂದರೆಗೆ ಪೊಲೀಸ್ ಇಲಾಖೆ ಹಾಗೂ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಅವರು ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ನನ್ನ ಜೀವಕ್ಕೆ ಏನೇ ಆದರೂ ಕಾಂಗ್ರೆಸ್, ಡಿಕೆಶಿ, ಹೆಬ್ಬಾಳ್ಕರ್ ಕಾರಣ: ಎಂಎಲ್ಸಿ ಸಿಟಿ ರವಿ
RELATED ARTICLES