ಹಿಂದೂ ಸಂಘಟನೆಯ ಮುಂದಾಳು ಸುಹಾಸ್ ಶೆಟ್ಟಿ ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ ಮತ್ತು ಸಂತಾಪ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸಾಮಾನ್ಯ ಜನರ ಬದುಕು ಸರಿಗೆ ಮೇಲಿನ ನಡಿಗೆಯಂತಾಗಿದೆ. ಪ್ರತೀ ಹೆಜ್ಜೆಯನ್ನೂ ಆತಂಕ ಮತ್ತು ಭಯದಿಂದ ಇಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮತ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಂ ಸಮುದಾಯದ ಅತಿಯಾದ ಓಲೈಕೆಯ ಮೂಲಕ ಸಮಾಜದಲ್ಲಿ ಇಂತಹ ದುಶ್ಶ್ಕೃತ್ಯ ನಡೆಯಲು ಸರಕಾರವೇ ಪರೋಕ್ಷ ಬೆಂಬಲ ನೀಡಿದಂತೆ ಕಂಡು ಬರುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದರು.
ಅವರು ಮಂಗಳೂರಿನ ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಮುಂದಾಳು ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಕಛೇರಿಯ ಬಳಿ ಹಮ್ಮಿಕೊಂಡ ಖಂಡನಾ ಮತ್ತು ಸಂತಾಪ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾಶ್ಮೀರದದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ತುತ್ತಾದ ಕುಟುಂಬಗಳಿಗೆ ಸಾಂತ್ವನ ಹೇಳುವ ಬದಲು ಕೇಂದ್ರ ಸರಕಾರದ ಭದ್ರತಾ ವೈಫಲ್ಯ, ಪಾಕಿಸ್ತಾನದೊಂದಿಗೆ ಯುದ್ಧದ ಅಗತ್ಯವಿಲ್ಲ ಎನ್ನುತ್ತಾ ಸಾವಿನ ಮನೆಯಲ್ಲೂ ನೀಚ ಮಟ್ಟದ ರಾಜಕಾರಣ ಮಾಡುವ ಕಾಂಗ್ರೆಸ್ ದೇಶದಲ್ಲಿ ನಡೆದ ಅನೇಕ ದೇಶದ್ರೋಹದ ಘಟನೆಗಳಲ್ಲಿಯೂ ಅವರೆಲ್ಲ ಅಮಾಯಕರು, ನಮ್ಮ ಬ್ರದರ್ಸ್ ಎನ್ನುತ್ತಾ ದಾರಿ ತಪ್ಪಿಸುವ ಕುಕೃತ್ಯವನ್ನು ಮಾಡಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಕಾನೂನು ಕಟ್ಟಳೆ ನಿಯಮಗಳಿಂದ ಪರಿಹಾರ ಸಿಗುವುದು ಮರೀಚಿಕೆಯಂತಾಗಿದೆ. ಪೊಲೀಸ್ ಇಲಾಖೆಯಲ್ಲಿ ಹುಬ್ಬಳ್ಳಿಯ ಅನ್ನಪೂರ್ಣ ಅವರಂತಹ ದಕ್ಷ ಪೊಲೀಸ್ ಅಧಿಕಾರಿಗಳು ಹೆಚ್ಚಿದಂತೆ ಸಮಾಜದಲ್ಲಿ ಇಂತಹ ದುಶ್ಶ್ಕೃತ್ಯಗಳನ್ನು ಮಟ್ಟ ಹಾಕಲು ಸಾಧ್ಯ ಎಂದು ಅವರು ಹೇಳಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ಹಿಂದೂಗಳಿಗೆ ಯಾವುದೇ ರಕ್ಷಣೆ ಇಲ್ಲದ ದುಸ್ಥಿತಿ ನಿರ್ಮಾಣವಾಗಿದೆ. ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಚ್ಚು ಬೀಸಿ ಹತ್ಯೆಗೈಯುವ ಇಂದಿನ ವಿಷಮ ಕಾಲಘಟ್ಟದಲ್ಲಿ ಜನತೆ ತಮ್ಮ ಸ್ವಯಂ ರಕ್ಷಣೆಗೆ ತಾವೇ ಮುಂದಾಗಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಪೆರಣoಕಿಲ ಶ್ರೀಶ ನಾಯಕ್, ಮಹಾವೀರ ಹೆಗ್ಡೆ, ಜಿಲ್ಲಾ ಪ್ರಧಾನ ಕಾಯದರ್ಶಿ ರೇಷ್ಮಾ ಉದಯ ಶೆಟ್ಟಿ, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಕುಂದರ್, ಶ್ರೀಕಾಂತ್ ನಾಯಕ್, ಪ್ರಿಯದರ್ಶಿನಿ ದೇವಾಡಿಗ, ಅನಿತಾ ಶ್ರೀಧರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ದಿಲೇಶ್ ಶೆಟ್ಟಿ, ಶಂಕರ ಅಂಕದಕಟ್ಟೆ, ಮಂಡಲ ಅಧ್ಯಕ್ಷರುಗಳಾದ ದಿನೇಶ್ ಅಮೀನ್ ಉಡುಪಿ ನಗರ, ಜಿತೇಂದ್ರ ಶೆಟ್ಟಿ ಕಾಪು, ರಾಜೀವ ಕುಲಾಲ್ ಉಡುಪಿ ಗ್ರಾಮಾಂತರ, ಸುರೇಶ್ ಶೆಟ್ಟಿ ಗೋಪಾಡಿ ಕುಂದಾಪುರ, ಪ್ರಮುಖರಾದ ನಯನಾ ಗಣೇಶ್, ಕುತ್ಯಾರು ನವೀನ್ ಶೆಟ್ಟಿ, ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ, ಶೈಲೇoದ್ರ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ನಳಿನಿ ಪ್ರದೀಪ್ ರಾವ್, ಜಗದೀಶ್ ಆಚಾರ್ಯ ಕಪ್ಪೆಟ್ಟು, ಸತೀಶ್ ಪೂಜಾರಿ, ಧೀರಜ್ ಕೆ.ಎಸ್., ಮಹೇಂದ್ರ ಕುಮಾರ್, ಮಧುಕರ ಮುದ್ರಾಡಿ, ಕುತ್ಯಾರು ಪ್ರಸಾದ್ ಸಹಿತ ಮೋರ್ಚಾ, ಪ್ರಕೋಷ್ಠ, ಮಂಡಲಗಳ ಪದಾಧಿಕಾರಿಗಳು, ನಗರಸಭಾ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.