Monday, July 15, 2024
HomeUncategorizedಪ್ರಜ್ವಲ್ ರೇವಣ್ಣ ಪ್ರಕರಣ | ಕಾಂಗ್ರೆಸ್ - ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಪ್ರಕರಣ | ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಕೈಕೈ ಮಿಲಾಯಿಸಿದ ಘಟನೆ ನಡೆದಿದೆ. ಹುಬ್ಬಳ್ಳಿಯ ಗೋಕುಲ ರಸ್ತೆ ಬಳಿಯಿರುವ ಹೋಟೆಲ್ ವೊಂದರ ಆವರಣದಲ್ಲಿ ಈ ಘಟನೆ ನಡೆದಿದೆ.

ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯುತ್ತಿದ್ದ ವೇಳೆ ಹೋಟೆಲ್ ಸುತ್ತುವರಿದ ಕಾಂಗ್ರೆಸ್ ಕಾರ್ಯಕರ್ತರು ಪ್ರಕರಣಕ್ಕೆ ಸಂಬಂಧಿಸಿ ಆಕ್ರೋಶ ಹೊರಹಾಕಿದರು. ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇಶಕ್ಕೆ ಕರೆತರಬೇಕು ಎಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಭೆ ಮುಗಿಸಿಕೊಂಡು ಹೊರಬಂದ ಜೆಡಿಎಸ್ ಮುಖಂಡರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿಯಾದರು. ಗೋ ಬ್ಯಾಕ್ ಕುಮಾರಸ್ವಾಮಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರೆ, ಜೆಡಿಎಸ್ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಬಳಿಕ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

RELATED ARTICLES
- Advertisment -
Google search engine

Most Popular