Sunday, July 14, 2024
Homeರಾಜಕೀಯಕಾಂಗ್ರೆಸ್‌ ಶಾಸಕನ ಪತ್ನಿ ನೇಣುಬಿಗಿದು ಆತ್ಮಹತ್ಯೆ

ಕಾಂಗ್ರೆಸ್‌ ಶಾಸಕನ ಪತ್ನಿ ನೇಣುಬಿಗಿದು ಆತ್ಮಹತ್ಯೆ

ಹೈದರಾಬಾದ್:‌ ಆಂಧ್ರ ಪ್ರದೇಶದ ಕಾಂಗ್ರೆಸ್‌ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನ ಅಲ್ವಾಲ್‌ ಪಂಚಶೀಲ ಕಾಲೋನಿಯ ಮನೆಯೊಂದರಲ್ಲಿ ಗುರುವಾರ ರಾತ್ರಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿದ್ದಾರೆ.
ಮೇಡಿಪಲ್ಲಿ ಸತ್ಯಂ ಮತ್ತು ರೂಪಾದೇವಿ 12 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ರೂಪಾದೇವಿ ಮೇಡ್ಚಲ್‌ ಮುನಿರಾಬಾದ್‌ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು.
ಒಂದು ತಿಂಗಳ ಹಿಂದೆಯಷ್ಟೇ ಇವರು ಅಲ್ವಾಲ್‌ ಪಂಚಶೀಲ ಕಾಲೊನಿಗೆ ಬಂದಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೆಲವು ದಿನಗಳಿಂದ ಶಾಸಕ ಹಾಗೂ ಪತ್ನಿ ನಡುವೆ ಭಿನ್ನಾಭಿಪ್ರಾಯಗಳಿದ್ದವು ಎನ್ನಲಾಗಿದೆ.
ಆತ್ಮಹತ್ಯೆಗೂ ಮುನ್ನ ರೂಪಾದೇವಿ ಶಾಸಕ ಸತ್ಯಂಗೆ ವಿಡಿಯೋ ಕಾಲ್‌ ಮಾಡಿ ತಾನು ಸಾಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸತ್ಯಂ ಮನೆಗೆ ಧಾವಿಸಿದರೂ ಪ್ರಯೋಜನವಾಗಲಿಲ್ಲ. ಅಷ್ಟರಲ್ಲಿ ರೂಪಾದೇವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿದ್ದರು. ತಕ್ಷಣವೇ ಪಕ್ಕದ ಆಸ್ಪತ್ರೆಗೆ ಆಕೆಯನ್ನು ಸಾಗಿಸಲಾಯಿತಾದರೂ ಅಷ್ಟರಲ್ಲಿ ಆಕೆ ಕೊನೆಯುಸಿರೆಳೆದಿದ್ದರು.

RELATED ARTICLES
- Advertisment -
Google search engine

Most Popular