
ರಾಜ್ಯದ ಜನತೆಗೆ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ಪರಿಣಾಮವಾಗಿ ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪರ‍್ವ ಜಯ ಸಾಧಿಸಿದೆ ಎಂದು ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾ ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಮತದಾರರು, ಕಾಂಗ್ರೆಸ್ ರ‍್ಕಾರದ ಯೋಜನೆಗಳಿಗೆ ಬೆಂಬಲ ನೀಡಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ದಿದ್ದಾರೆ ಎಂದು ಅವರು ಹೇಳಿದರು.
ಈ ಹಿನ್ನೆಲೆದಲ್ಲಿ, ಐವನ್ ಡಿ’ಸೋಜಾ ಅವರು ಮುಖ್ಯಮಂತ್ರಿಯವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿ, ಈ ಐತಿಹಾಸಿಕ ಜಯಕ್ಕಾಗಿ ಅಭಿನಂದನೆ ಸಲ್ಲಿಸಿದರು.
